ಕಲಬುರಗಿ: ಅಂತರಾಷ್ಟ್ರೀಯ ಮಹಿಳಾ ದಿನದಂಗವಾಗಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾ.8 ರಂದು ಬೆಳಗ್ಗೆ 10.15 ಕ್ಕೆ ನಗರದ ಕನ್ನಡ ಭವನದಲ್ಲಿ ಕವಯಿತ್ರಿ ಕಾವ್ಯಸಿರಿ ಎಂಬ ಮಹಿಳಾ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ತಾಲೂಕಾ ಕಸಾಪ ಅಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ ತಿಳಿಸಿದ್ದಾರೆ.
ಸ್ತ್ರೀ ಸ್ವಾತಂತ್ರ್ಯ ಸಮಾನತೆಯ ಕುರಿತು ಚಿಂತನೆಗಳನ್ನಿ ಅಭಿವ್ಯಕ್ತಿಗೊಳಿಸುವ ಉದ್ದೇಶ ಈ ಕವಿಗೋಷ್ಠಿ ಹೊಂದಿದೆ.
ಲೇಖಕಿ-ಪ್ರಾಧ್ಯಾಪಕಿ ಡಾ. ಸಾರಿಕಾದೇವಿ ಕಾಳಗಿ ಕವಿಗೋಷ್ಠಿಗೆ ಚಾಲನೆ ನೀಡಲಿದ್ದು, ಹಿರಿಯ ಸಾಹಿತಿ ಡಾ. ವಾಸುದೇವ ಸೇಡಂ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಪ್ರಮುಖರಾದ ಈರಮ್ಮಾ ಅವಧೂತಮಠ, ಅನ್ನಪೂರ್ಣ ಮಾಲಿಪಾಟೀಲ, ಶಿವಲೀಲಾ ಶಾಸ್ತ್ರೀ, ನಂದಿನಿ ಸನ್ಬಾಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಸತ್ಕರಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.