ಜನಸ್ಪಂದನ ಕಾರ್ಯಕ್ರಮ: ನೂರಾರು ಸಂಖ್ಯೆಯ ಜನರ ಸಮಸ್ಯೆಗಳಿಗೆ ಪರಿಹಾರ

0
88

ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅವಾಹಲು ಸ್ವೀಕರಿಸಿದರು.

ಕಳೆದ ವರ್ಷ ಸಪ್ಟೆಂಬರ್ ತಿಂಗಳಲ್ಲಿ ಚಿಂಚೋಳಿಯಲ್ಲಿ ಮೊದಲ ಜನಸ್ಪಂದನೆ ನಡೆದಿತ್ತು. ಅದಾದ ನಂತರ ನಡೆದ ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಅರ್ಜಿ ಹಿಡಿದು ಬಂದಿದ್ದ ಜನರು ತಮ್ಮ ಕುಂದು‌ಕೊರತೆ ಹಾಗೂ ದೂರು ದುಮ್ಮಾನಗಳನ್ನು ಸಲ್ಲಿಸಿದರು.

Contact Your\'s Advertisement; 9902492681

ಸಾರ್ವಜನಿಕರ ಮನವಿಗಳಿಗೆ ಸ್ಪಂದಿಸಿದ ಸಚಿವರು ಬಹುತೇಕ ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿ ಸಾರ್ವಜನಿಜರ‌ ಸಮಸ್ಯೆ ಬಗೆಹರಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಶಿಕ್ಷಣ, ಕಂದಾಯ, ಕುಟಂಬ ಕಲ್ಯಾಣ, ಗೃಹ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರು.

ಅಂಗವಿಕಲರು,‌ಮಹಿಳೆಯರು ಹಾಗೂ ಹಿರಿಯ ನಾಗರಿಕರ ಅರ್ಜಿಗಳನ್ನು ಮೊದಲಾದ್ಯತೆಯ ಮೇಲೆ ಸ್ವೀಕರಿಸಿದ ಸಚಿವರು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ವಿಳಂಬ ಮಾಡುತ್ತಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮಹಾನಗರ ಪಾಲಿಕೆ ವ್ಯಾಪ್ತಿಯ ಹಾಗೂ ವಕ್ಫ್ ಬೋರ್ಡ್ ಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಶೀರ್ಘದಲ್ಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಆವರಣದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here