ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಕೇಂದ್ರ ಆರಂಭ

0
16

ಸುರಪುರ:ಇಲ್ಲಿಯ ತಹಸಿಲ್ದಾರ್ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಪ್ರಸಕ್ತ ಸಾಲಿನಲ್ಲಿ ನಮ್ಮ ತಾಲೂಕು ಬರಗಾಲಕ್ಕೆ ಒಳಪಟ್ಟಿರುವುದರಿಂದ ಬೇಸಿಗೆ ಸಂದರ್ಭದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಸಹಾಯವಾಣಿ ಸಂಖ್ಯೆ 08443-256043 ನಂಬರ್‍ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here