ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಬಾಲಕಿಯ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದ್ದು.
ಮೃತಪಟ್ಟ ವಿದ್ಯಾರ್ಥಿನಿ ಭಾಗ್ಯಶ್ರೀ (17) ತಂದೆ ಸಾಯಬಣ್ಣ ತಾಯಿ ಶಾಂತಮ್ಮ ಕಡಬೂರ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಕರದಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಮೃತಪಟ್ಟ ಹಿಂದಿನ ದಿನ ಅಂದ್ರೆ ಮಾರ್ಚ್ 7ರಂದು ವಿದ್ಯಾರ್ಥಿನಿ ಶಾಲೆಯಲ್ಲಿ ಸಹಪಾಠಿಗಳೊಂದಿಗೆ ಬಿಳ್ಕೊಡುಗೆ ಸಮಾರಂಭ ಕಾರ್ಯಕ್ರಮದಲ್ಲಿ ಸಂತೋಷದಿಂದ ಭಾಗಿಯಾಗಿದಳು.
ಮಹಾಶಿವರಾತ್ರಿ ನಿಮಿತ್ಯ ಶುಕ್ರವಾರ ಶಾಲೆಗೆ ರಜೆ ಇದ್ದ ಕಾರಣ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ಗೆಳತಿಯರೊಂದಿಗೆ ಉಳಿದಿದ್ದಳು ಸಾಯಂಕಾಲ ಮೃತಪಟ್ಟ ವಿದ್ಯಾರ್ಥಿನಿ ಭಾಗ್ಯಶ್ರೀ ಹೊಟ್ಟೆ ನೋವು ಎನ್ನುತ್ತಿದ್ದಳು ಎಂದು ಹೇಳಿದಷ್ಟೇ ಕಾರಣ ನಂತರ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ಆಗಿದೆ.
ಈ ಸಾವು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಹೀಗಾಗಿ ಈ ವಿಧ್ಯಾರ್ಥಿನಿಯ ಸಾವಿನ ಕುರಿತು ಸ್ವಾತಂತ್ರವಾಗಿ ತನಿಖೆ ನಡೆಸಿ ಇದಕ್ಕೆ ಕಾರಣರಾದವರನ್ನು ಕೂಡಲೇ ಪತ್ತೆ ಹಚ್ಚಿ ಉಗ್ರವಾದ ಶಿಕ್ಷೆಗೆ ಗುರಿ ಪಡಿಸಬೇಕು.
ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ 25ಲಕ್ಷ ಪರಿಹಾರ ನೀಡಬೇಕು ವಸತಿ ನಿಲಯದ ಸುರಕ್ಷತೆ ಕಾಪಾಡುವಲ್ಲಿ ವಿಫಲರಾದ ಹಾಸ್ಟೆಲ್ ವಾರ್ಡನ್ ಹಾಗೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳನ್ನು ಹೊಣೆ ಗಾರರನ್ನಗಿ ಮಾಡಿ ಕೂಡಲೇ ಅವರನ್ನು ಕಾನೂನು ಪ್ರಕಾರ ಶಿಸ್ತಿನ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ತಾಲೂಕಿನ ವಿಧ್ಯಾರ್ಥಿಗಳನ್ನು ಒಗ್ಗೂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾದ್ಯಂತ ಉಗ್ರವಾದ ಹೋರಾಟದ ಎಚ್ಚರಿಕೆ ನೀಡಿದರು.
ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಅಧ್ಯಕ್ಷ ಜಗದೇವ ಎಸ್ ಕುಂಬಾರ, ತಾಲೂಕಾ ಅಧ್ಯಕ್ಷ ಪೃಥ್ವಿರಾಜ್ ಸಾಗರ, ಜಿಲ್ಲಾ ಉಪಾ ಅಧ್ಯಕ್ಷ ಕುಮಾರ್ ಜಾಧವ್ ಈ ಸಂದರ್ಭದಲ್ಲಿ ಇದ್ದರು.