ಕಲಬುರಗಿ: ಕಲಬುರಗಿ ಲೋಕಸಭೆ ಚುನಾವಣೆಗೆ ಈ ಬಾರಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು ಖರ್ಗೆ ಸೇರಿ ಯಾರೇ ನಿಂತರು ಕಾಂಗ್ರೆಸ್ ಸೋಲುವುದು ಖಚಿತ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಮಾಲಿಕಯ್ಯಾ ಗುತ್ತೇದಾರ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 2019 ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಲಿಕಯ್ಯ ಗುತ್ತೇದಾರ ಬಾಬುರಾವು ಚಿಂಚನಸೂರ್ ಅವರ ಹವಾದಿಂದ ಮಲ್ಲಿಕಾರ್ಜುನ ಖರ್ಗೆ ಸೋತ್ತಿದ್ದರು. ಆದರೆ ಈ ಬಾರಿ ಪ್ರಧಾನಿ ಮೋದಿ ಅವರ ಹವಾ ಕಲಬುರಗಿಯಲ್ಲಿದೆ ಕಾಂಗ್ರೆಸ್ ಸೋಲುವುದು ಖಚಿತವಾಗಿದೆ ಎಂದು ಭವಿಷ್ಯ ನುಡಿದರು.
ಪ್ರಧಾನಿ ಮೋದಿ ಅವರು ನೋಡಿದಂತೆ ಸಿಎಎ ಜಾರಿಗೆ ತಂದಿದ್ದಾರೆ ಇದು ನಮ್ಮ ಪಕ್ಷಕ್ಕೆ ಅನುಕೂಲ ಆಗಲಿದೆ. ಪ್ರಧಾನಿ ಮೋದಿ ಅವರ ಉಧಾರೋತ್ವದಿಂದ ಕಲಬುರಗಿ ಕಳೆದ ಐದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಈ ಭಾಗದ ಬಹುದಿನಗಳ ಬೇಡಿಕೆಗಳು ಈಡೇರಿಕೆ ಆಗಿವೆ ಎಂದರು.
ಪಕ್ಷದ ಸಂಸದರೊಬ್ಬರು ಸಂವಿಧಾನದ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವುದು ಅವರ ವೈಯಕ್ತಿಕ ವಿಚಾರ ಅದಕ್ಕೆ ಪಕ್ಷ ಹೇಳಿಕೆಯಲ್ಲ. ಈ ಹಿಂದೆಯು ಅವರು ಸಾಕಷ್ಟು ಗೊಂದಲ ಸೃಷ್ಟಿಸಿದರು ಅದಕ್ಕೆ ಅವರಿಗೆ ಪಕ್ಷದಿಂದ ನೋಟಿಸ್ ಸಹ ನೀಡಲಾಗಿತ್ತು. ಅವರಿಗೆ ಲೋಕಸಭೆ ಟಿಕೆಟ್ ನೀಡುವ ವಿಚಾರ ಪಕ್ಷದಲ್ಲಿ ತೀರ್ಮಾನ ಕೈಗೊಳಲಾಗುತ್ತದೆ ಎಂದರು.