- ಎಂ.ಡಿ ಮಶಾಖ್ ಚಿತ್ತಾಪುರ
ಚಿತ್ತಾಪುರ: ಪಟ್ಟಣದ ಮಳಖೇಡ ರಸ್ತೆಯ ಹೊರವಲಯದಲ್ಲಿ ಶಾಸಕ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಇಚ್ಛಾಶಕ್ತಿಯಿಂದ ನಿರ್ಮಾಣವಾಗುತ್ತಿರುವ ಕ್ರೀಡಾಂಗಣದಿಂದ ತಾಲೂಕಿನಲ್ಲಿ ಕ್ರೀಡಾಪಟುಗಳಿಗೆ ಪೂರಕವಾಗಿದ್ದು, ನೂರಾರು ಉತ್ತಮ ಕ್ರೀಡಾಪಟುಗಳು ಹೊರಹೊಮ್ಮಿದ್ದಾರೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಾಯಬಣ್ಣ ಕಾಶಿ ಹಾಗೂ ಕಾರ್ಯದರ್ಶಿ ಬಾಬು ಕಾಶಿ ಜಂಟಿಯಾಗಿ ಹೇಳಿದರು.
ಪಟ್ಟಣದ ಒಳಾಂಗಣ ಕ್ರೀಡಾಂಗಣದಲ್ಲಿ ಮಾ.13ರಂದು ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಉತ್ತಮ ಕ್ರೀಡಾ ವಾತಾವರಣ ಹಾಗೂ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಚಿವರು 6.30 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿದೆ. ಕೆಲವರು ಇಲ್ಲಸಲ್ಲದ ಹೇಳಿಕೆ ನೀಡಿ ಗೊಂದಲ ಮೂಡಿಸಿದ್ದಾರೆ.
ಕಾಮಗಾರಿ ಗುಣಮಟ್ಟದಿಂದ ಮಾಡಲು ಸಚಿವರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಉಪಾಧ್ಯಕ್ಷ ಸಂತೊಷ ಕಲಾಲ್, ಕಾರ್ಯದರ್ಶಿ ಬಾಬು ಕಾಶಿ, ಲಖನ್ ಸಿಂಗ್ ರಜಪುತ್, ಶ್ರೀನಿವಾಸ ಪೇಂದು, ರೋಹಿತ್ ಚವ್ಹಾಣ, ಅಬ್ದುಲ್ ಖದೀರ್, ವಿಜಯಕುಮಾರ ಗಡ್ಡಿಮನಿ ಇದ್ದರು.