ಸುರಪುರ: ಜಿಲ್ಲಾಡಳಿತ ಯಾದಗಿರಿ,ಜಿಲ್ಲಾ ಪಂಚಾಯತ್ ಯಾದಗಿರಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಕ್ರೀಡಾ ಪ್ರಾಧಿಕಾರ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಪ್ರಭು ಕಾಲೇಜು ಮೈದಾನದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ನಡೆಸಲಾಯಿತು.
ಕ್ರೀಡಾಕೂಟಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಕ್ರೀಡಾ ಧ್ವಜಾರೋಹಣದ ಮೂಲಕ ಚಾಲನೆ ನೀಡಿ ಮಾತನಾಡಿ,ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃಧ್ಧಿಸಲಿದೆ.ನಾನುಕೂಡ ಒಬ್ಬ ಕ್ರೀಡಾಪಟುವಾಗಿದ್ದು ಕ್ರೀಡೆಗಳಿಗೆ ಇರುವ ಮಹತ್ವ ತಿಳಿದಿದೆ.ಇಮದು ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಆಟಗಳಲ್ಲಿ ಭಾಗವಹಿಸಿ,ಯಾವುದೆ ರೀತಿಯ ಗಲಾಟೆಗಳಿಗೆ ಅವಕಾಶ ಮಾಡಿಕೊಡದೆ ಕ್ರೀಡಾಭಿಮಾನ ಮೆರೆಯುವ ಮೂಲಕ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ಹೋಗುವಂತಾಗಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಎಪಿಎಂಸಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ,ಜಿಲ್ಲಾ ಪಂಚಾಯತಿ ಸದಸ್ಯ ಮರಿಲಿಂಗಪ್ಪ ಕರ್ನಾಳ,ಕಾಲೇಜಿನ ಪ್ರಾಚಾರ್ಯ ಎಸ್.ಹೆಚ್.ಹೊಸಮನಿ,ಉಪ ಪ್ರಾಚಾರ್ಯ ವೇಣುಗೋಪಾಲ ಜೇವರ್ಗಿ ಮುಖಂಡರಾದ ದೊಡ್ಡ ದೇಸಾಯಿ ದೇವರಗೋನಾಲ,ಸುರೇಶ ಸಜ್ಜನ್,ದುರ್ಗಪ್ಪ ಗೋಗಿಕೇರಾ,ಪ್ರಕಾಶ ಸಜ್ಜನ್,ಭೀಮಣ್ಣ ಬೇವಿನಾಳ ಸೇರಿದಂತೆ ಅನೇಕ ಮುಖಂಡರು ಹಾಗು ಕ್ರೀಡಾಪಟುಗಳಿದ್ದರು.