ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿಯನ್ನಾಗಿ ಬಂಡಾಯ ಸಾಹಿತಿ ಧರ್ಮಣ್ಣ ಎಚ್ ಧನ್ನಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.
ಕಳೆದ ಮೂರುವರೆ ದಶಕಗಳಿಂದ ಕಥೆ, ಸಾಹಿತ್ಯ, ಸಾಂಸ್ಕøತಿಕ, ಹೋರಾಟ ಮತ್ತು ಸಮಾಜ ಸೇವೆ ಸಲ್ಲಿಸುತ್ತಿರುವ ಧನ್ನಿ ಅವರು, ವೃತ್ತಿಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರವೃತ್ತಿಯಲ್ಲಿ ಕವಿ, ಲೇಖಕರಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದಾರೆ. ದಲಿತ, ಬಂಡಾಯದ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಂಪಾದನೆ ಸೇರಿ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ.
ಮೌನ ಮಾತಾಡಿದಾಗ ಮತ್ತು ಒಡಲ ಬ್ಯಾನಿ ಕವನ ಸಂಕಲನಗಳ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದಾರೆ. 80 ರ ದಶಕದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅನೇಕ ಹೋರಾಟಗಳಲ್ಲಿ ಪಾಲ್ಗೊಂಡು ಜನರ ವಿಶೇಷ ಗಮನ ಸೆಳೆದಿದ್ದಾರೆ.
ಅಮರ್ಜಾ ಪ್ರಕಾಶನ ಸ್ಥಾಪಿಸಿ ಜಿಲ್ಲೆಯ ಅನೇಕ ಉದಯೋನ್ಮುಖ ಯುವ ಬರಹಗಾರರನ್ನು ಗುರುತಿಸಿ ಮೌಲಿಕ ಕೃತಿಗಳನ್ನು ಪ್ರಕಟಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಜಿಲ್ಲೆಯಲ್ಲಿ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಪರಿಷತ್ತಿನ ಪದಾಧಿಕಾರಿಗಳಾಗಿ ಹೆಚ್ಚಾಗಿ ಸಮಾಜಮುಖಿ ಚಿಂತಕರು, ಸಾಹಿತಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಪರಿಷತ್ತನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯ ಮಾಡಲಾಗುತ್ತಿದೆ.