ನೀತಿ ಸಂಹಿತೆ ಹಿನ್ನೆಲೆ: ನಾಳೆ ಜಿಲ್ಲಾಧಿಕಾರಿ ಫೌಜಿಯಾ ತರನ್ನೂಮ್ ಮುದ್ರಕರೊಂದಿಗೆ ಸಭೆ

0
40

ಕಲಬುರಗಿ:  ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕರಪತ್ರ, ಪೋಸ್ಟರ್, ಪಾಂಪ್ಲೆಟ್ಸ್, ಬ್ಯಾನರ್, ಬಂಟಿಂಗ್ಸ್ ಮುದ್ರಣಕ್ಕೆ ಸಂಬಂಧಿಸಿದ ಚುನಾವಣಾ ಆಯೋಗದ‌ ಮಾರ್ಗಸೂಚಿ ಕುರಿತು ವಿವರಿಸಲು ಮಾರ್ಚ್ 21 ರಂದು ಸಂಜೆ 5 ಗಂಟೆಗೆ ಜಿಲ್ಲೆ ಎಲ್ಲಾ ಮುದ್ರಕರ (ಪ್ರಿಂಟಿಂಗ್ ಪ್ರೆಸ್) ಮಾಲೀಕರ, ವ್ಯವಸ್ಥಾಪಕರ ಸಭೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮುದ್ರಕರು ತಪ್ಪದೆ ಸಭೆಯಲ್ಲಿ ಭಾಗವಹಿಸಬೇಕೆಂದು ಸಹಾಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here