ಜನರ ಸಮಸ್ಯೆಗೆ ಸ್ಪಂದಿಸಿ ಪ್ರಮುಖ ಸ್ಥಳಗಳಲ್ಲಿ ನೀರಿನ ಘಟಕ ಸ್ಥಾಪಿಸಿ : ಬಾಲರಾಜ್ ಗುತ್ತೇದಾರ

0
24

ಕಲಬುರಗಿ : ಬೇಸಿಗೆ ಪ್ರಾರಂಭಿಕ ಹಂತದಲ್ಲಿಯೆ ಕಲಬುರಗಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ಜನರು ಪರದಾಡುತ್ತಿದ್ದಾರೆ.ಕೂಡಲೇ ಜಿಲ್ಲಾಡಳಿತ ಕುಡಿಯುವ ನೀರಿನ ಸರಬರಾಜು ಮಾಡಲು ಮುಂದಾಗಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕಲಬುರಗಿ ನಗರ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರು ಸಿಗುತ್ತಿಲ್ಲ. ಕೊಳವೆ ಬಾವಿಗಳು ಬತ್ತಿ ಹೋಗಿವೆ.ನಲ್ಲಿಗಳಲ್ಲಿ ನೀರು ಸರಬರಾಜು ಆಗುತ್ತಿಲ್ಲ.ಕೆಲವು ಬಡಾವಣೆಗಳಲ್ಲಿ ಮೊದ ಮೊದಲು ವಾರಕ್ಕೋಮ್ಮೆಯಾದರೂ ನಲ್ಲಿಗಳಲ್ಲಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು.ಆದರೆ ಈಗ ಹದಿನೈದು ದಿನಕ್ಕೊಮ್ಮೆ ನೀರು ಬರುತ್ತದೆ.ಇದರಿಂದ ಜನರು ದಿನ ನಿತ್ಯ ಜೀವನದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

Contact Your\'s Advertisement; 9902492681

ಮಾರ್ಚ್ ತಿಂಗಳ ಪ್ರಾರಂಭದಲ್ಲಿಯೇ ಈ ಸಮಸ್ಯೆ ಉಂಟಾದರೂ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಮುನ್ನೇಚ್ಚರಿಕೆ ಕ್ರಮ ಕೈಗೊಂಡಿಲ್ಲ.ಬೀಸಿಲು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೆಡೆ ಈ ಸಮಸ್ಯೆ ಇದ್ದರೆ ಇನ್ನೊಂದೆಡೆ ಬೀಸಿಲಿನ ಝಳದಿಂದ ಜನರು ಕಂಗಾಲಾಗಿದ್ದಾರೆ.ಆದರೆ ಮಹಾನಗರ ಪಾಲಿಕೆ ಹೆಚ್ಚುತ್ತಿರುವ ಉಷ್ಣತೆ ಶಮನಕ್ಕೆ ರಸ್ತೆ ಮತ್ತು ಬೀದಿಗಳಲ್ಲಿ ನೀರು ಚಿಮುಕಿಸಬೇಕು.ಕಲಬುರಗಿ ನಗರದ ಪ್ರಮುಖ ಸ್ಥಳಗಳಲ್ಲಿ, ಪ್ರತಿ ಗ್ರಾಪಂ ಮಟ್ಟದಲ್ಲಿ ಜನರಿಗೆ ಶುದ್ದ ಕುಡಿಯಲು ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕು.ಆದರೆ ಇವ್ಯಾವುದೂ ತಲೆ ಕೆಡಿಸಿಕೊಳ್ಳದೆ ಜಿಲ್ಲಾಡಳಿತ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಇನ್ನೂ ಎರಡು ತಿಂಗಳು ಬೇಸಿಗೆ ಇರುವುದರಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗುತ್ತದೆ.ಜನರು ರೊಚ್ಚಿಗೆದ್ದು ಬೀದಿಗಿಳಿಯುವ ಮುನ್ನ ಜಿಲ್ಲಾಡಳಿತ ಕುಡಿಯುವ ನೀರು ಸರಬರಾಜಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here