ವೇತನ ಸಹಿತ ರಜೆ ಘೋಷಣೆ

0
39

ಬೆಂಗಳೂರು; ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024 ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೆಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಯಾದಗಿರಿ ಜಿಲ್ಲೆಯ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಸಹ ದಿನಾಂಕ:07-05-2024 (ಮಂಗಳವಾರ) ರಂದು ನಿಗಧಿಯಾಗಿರುತ್ತದೆ.

ಸದರಿ ದಿನಾಂಕಗಳಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ.135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು / ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ.

Contact Your\'s Advertisement; 9902492681

ಚುನಾವಣೆಯು ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ / ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here