ಜೆಡಿಎಸ್ ಶಾಸಕ ಶರಣ ಗೌಡ ಜೊತೆ ಸಂಸದ ಡಾ. ಉಮೇಶ್ ಜಾಧವ್ ಸುಧೀರ್ಘ ಸಮಾಲೋಚನೆ

0
29

ಶಾಸಕರ ಭೇಟಿಯಿಂದ ವಿಶ್ವಾಸ ಹೆಚ್ಚಳ: ಡಾ. ಉಮೇಶ್ ಜಾಧವ್

ಯಾದಗಿರಿ: ಬಿಜೆಪಿ – ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಮತ್ತು ಗುರುಮಿಟ್ಕಲ್ ಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರ್ ಮಹತ್ವದ ಸಭೆ ನಡೆಸಿದರು. ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ನಾಳೆ ಕುಮಾರಸ್ವಾಮಿಯವರ ಜೊತೆ ಚರ್ಚಿಸಿ ಗುರುಮಿಟ್ಕಲ್ ಕ್ಷೇತ್ರದಲ್ಲಿ ಗೆಲ್ಲಲು ಚುನಾವಣಾ ತಂತ್ರ ಹೆಣೆಯಲಾಗುವುದು ಎಂದು ಶರಣಗೌಡ ಕಂದಕೂರು ಹೇಳಿದರು.

ಯಾದಗಿರಿಯಲ್ಲಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಮತ್ತು ಶರಣಗೌಡ ಕಂದಕೂರ್ ಅವರು ಶಾಸಕರ ನಿವಾಸದಲ್ಲಿ ಸೋಮವಾರ ಮಹತ್ವದ ಸಭೆಯನ್ನು ನಡೆಸಿ ಚುನಾವಣಾ ಪ್ರಚಾರ ನಡೆಸುವ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದರು.

Contact Your\'s Advertisement; 9902492681

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಆಗಿ ಸ್ಪರ್ಧೆಗೆ ಇಳಿದಿದ್ದು ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸುವ ಕಡೆ ಜೆಡಿಎಸ್ ತನ್ನ ಪೂರ್ಣ ಬೆಂಬಲವನ್ನು ನೀಡುವುದಲ್ಲದೆ ಗುರುಮಿಟ್ಕಲ್ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಹಾಗೂ ಚುನಾವಣೆಯಲ್ಲಿ ತಂತ್ರಗಳನ್ನು ಹೆಣೆಯುವ ಬಗ್ಗೆ ಪಕ್ಷದ ಹಿರಿಯ ನಾಯಕರಾದ ಎಚ್. ಡಿ ಕುಮಾರಸ್ವಾಮಿ ಅವರ ಜೊತೆ ನಾಳೆ (ಮಂಗಳವಾರ) ಮಹತ್ವದ ಚರ್ಚೆ ನಡೆಸಲು ಜೆಡಿಎಸ್ ಪ್ರಮುಖರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗುರುಮಿಟ್ಕಲ್ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ತಮ್ಮೆಲ್ಲ ಶ್ರಮವಹಿಸಿ ಪೂರ್ಣವಾಗಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡು ಮೈತ್ರಿ ಧರ್ಮವನ್ನು ಪಾಲನೆ ಮಾಡಲಾಗುವುದು.ಜಾಧವ್ ಅವರಿಗೆ ಅತ್ಯಧಿಕ ಮತಗಳ ಮುನ್ನಡೆಯೊಂದಿಗೆ ಮತ್ತೊಮ್ಮೆ ಗೆಲ್ಲಿಸುವುದರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹ್ಯಾಟ್ರಿಕ್ ಪ್ರಧಾನಿಯನ್ನಾಗಿಸುವ ಕಾರ್ಯದಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರೊಂದಿಗೆ ಸಮನ್ವಯದಿಂದ ಚುನಾವಣಾ ಕಣದಲ್ಲಿ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಕಂದುಕೂರ್ ಹೇಳಿದರು.

ಯಾದಗಿರಿಯಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಈಗಾಗಲೇ ಕೈಗೊಳ್ಳಲಾಗಿದ್ದು ಮಂಗಳವಾರ ಹೆಚ್. ಡಿ ಕುಮಾರಸ್ವಾಮಿಯವರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರದಲ್ಲಿ ನಮ್ಮ ಪಕ್ಷದ ನಾಯಕರು ಭಾಗವಹಿಸುವ ಬಗ್ಗೆ ವಿವರವಾಗಿ ಚರ್ಚೆ ನಡೆಯಲಿದೆ ಎಂದು ಹೇಳಿದರು .

ಗುರುಮಿಟ್ಕಲ್ ಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರ್ ಭೇಟಿಯಿಂದ ವಿಶ್ವಾಸ ಇಮ್ಮಡಿಗೊಂಡಿದ್ದು ಜೆಡಿಎಸ್ ಬಿಜೆಪಿ ಮೈತ್ರಿಕೂಟ ವು ದಾಖಲೆಯ ಮತಗಳಿಂದ ಮುನ್ನಡೆ ಸಾಧಿಸಿ ಕಾಂಗ್ರೆಸ್ಸಿಗೆ ಮುಖಭಂಗ ಮಾಡಲಿದೆ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದರು.

ಯುಗಾದಿಯ ಮುನ್ನಾ ದಿನವಾದ ಸೋಮವಾರ ಶಾಸಕರ ಮನೆಗೆ ಖುದ್ದಾಗಿ ಭೇಟಿ ನೀಡಿ ಶುಭಾಶಯ ಕೋರಿ ಮಹತ್ವದ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ ಈ ಭೇಟಿ ಮೈತ್ರಿ ಕೂಟದ ವಿಶ್ವಾಸವನ್ನು ಹೆಚ್ಚಳ ಮಾಡಿದೆ.

ಮಾತ್ರವಲ್ಲ ಶಾಸಕರು ತನ್ನ ಪೂರ್ಣ ಸಹಕಾರ ನೀಡಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಂತ್ರಗಳನ್ನು ರೂಪಿಸಲು ಪಕ್ಷದ ಪ್ರಮುಖರ ಜೊತೆ ಮಂಗಳವಾರ ಸಭೆ ನಡೆಸಿ ಕಾರ್ಯ ಸೂಚಿಯನ್ನು ಕಾರ್ಯಕರ್ತರಿಗೆ ನೀಡಲಿದ್ದಾರೆ ಎಂದು ಹೇಳಿದರು.

ಗುರುಮಿಟ್ಕಲ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪೂರ್ಣ ಸಹಕಾರದೊಂದಿಗೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಈಗಾಗಲೇ ಸಭೆಗಳನ್ನು ನಡೆಸಿದ್ದಾರೆ. ಜಂಟಿ ಚುನಾವಣಾ ಕಾರ್ಯತಂತ್ರ ರೂಪಿಸಲಾಗುವುದು ಎಂದು ಹೇಳಿದರು.

ಬಳಿಕ ಜಾಧವ್ ಅವರು ಯಾದಗಿರಿಯಲ್ಲಿ ಬಿಜೆಪಿಯ ಹಲವು ಮುಖಂಡರನ್ನು ಭೇಟಿಯಾಗಿ ಗುರುಮಿಟ್ಕಲ್ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here