ಕುಡಿವ ನೀರಿನ ಸಮಸ್ಯೆ ನೀಗಿಸಲು ಶಾಸಕರ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಕಮಿಟಿ ಮುಂದುವರಿಸಲು ಆಗ್ರಹ

0
32

ಕಲಬುರಗಿ: ಜನ ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆ ನೀಗಿಸಲು ಶಾಸಕರ ಅಧ್ಯಕ್ಷತೆಯ ಟಾಸ್ಕ್ ಪೋರ್ಸ್ ಮುಂದುವರಿಸಬೇಕು ಎಂದು ಮುಖ್ಯಮಂತ್ರಿಗಳ ಸಲಹೆಗಾರ, ಶಾಸಕ ಬಿ.ಅರ್. ಪಾಟೀಲ ಮನವಿ ಮಾಡಿದರು.

ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆಯುಂಟಾಗಲಿದ್ದು, ಟಾಸ್ಕ್ ಪೋರ್ಸ್ ರಚಿಸುವಂತೆ ಚುನಾವಣಾ ಆಯೋಗಕ್ಕೆ ಈ ಹಿಂದೆ ಪತ್ರ ಬರೆದಿದ್ದೆ. ಪತ್ರಕ್ಕೆ ಚುನಾವಣಾ ಆಯೋಗದಿಮದ ಈವರೆಗೆ ಉತ್ತರವೇ ಇಲ್ಲ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

Contact Your\'s Advertisement; 9902492681

ಕೋಡ್ ಆಫ್ ಕಂಡೆಕ್ಟ್ ಇರುವುದರಿಂದ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದ್ದು, ಅನೇಕ ಜನ ಇಒಗಳು ವರ್ಗಾವಣೆಯಾಗಿದ್ದಾರೆ. ಪಿಡಿಒಗಳು ಕಡಿಮೆ ಇದ್ದಾರೆ. ಅಧಿಕಾರಿಗಳ ಮಧ್ಯೆ ಪರಸ್ಪರ ಸಹಕಾರ, ಹೊಂದಾಣಿಕೆ ಇಲ್ಲದ್ದರಿಂದ ಬರ ನಿರ್ವಹಣೆ ನೀಗಿಸಲು ಅವರಿಂದ ಆಗುತ್ತಿಲ್ಲ ಎಂದು ಅವರು ಆಪಾದಿಸಿದರು.

ಇದರಿಂದಾಗಿ ಜನ ಹಾಗೂ ಜಾನುವಾರುಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಜನರ ಸಮಸ್ಯೆ ಬಗೆಹರಿಸಲು ಸರ್ಕಾರ ತಯಾರಿದೆ.‌ ಅದಕ್ಕೆ ಅಗತ್ಯವಾದ ಹಣ ಸಹ ಇದೆ. ಚುನಾವಣಾ ಆಯೋಗದ ಈ ನಿರ್ಧಾರದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಹೇಳಿದರು.

ಬರ ನಿರ್ವಹಣೆಗಾಗಿ ಇರುವ ನರೇಗಾ ಯೋಜನೆ ಕೂಡ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಅವರು ಆರೋಪಿಸಿದರು. ಆಳಂದ ಕ್ಷೇತ್ರದಲ್ಲಿ ಒಟ್ಟು 89,000 ಕಾರ್ಮಿಕರಿದ್ದಾರೆ. 34,000 ಜಾಬ್ ಕಾರ್ಡ್ ಹೊಂದಿದ್ದಾರೆ. ಆದರೆ ಕೇವಲ 4000 ಜನರಿಗೆ ಮಾತ್ರ ಕೆಲಸ ಕೊಡುತ್ತಿದ್ದಾರೆ. ಇದರಿಂದಾಗಿ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದರು.

ತಾಲ್ಲೂಕಿನಲ್ಲಿರುವ 34 ಕೆರೆಗಳು ಬತ್ತಿ ಹೋಗಿದ್ದು, ಹೂಳೆತ್ತುವ ಕೆಲಸ, ಗೋಕಟ್ಟಾ ನಿರ್ಮಾಣ, ಶಿವಪುರ ಮಾದರಿ ನೀರು ನಿಲ್ಲಿಸುವ ಕೆಲಸ ಆಗಬೇಕಾಗಿದೆ ಎಂದು ವಿವರಿಸಿದರು.

ಈ ಹಿಂದೆ ನೀತಿ ಸಂಹಿತೆ ಜಾರಿಯಿದ್ದಾಗಲೂ ಶಾಸಕರ ಅಧ್ಯಕ್ಷತೆಯ ಟಾಸ್ಕ್ ಪೋರ್ಸ್ ಕಾರ್ಯನಿರ್ವಹಿಸುತ್ತಿತ್ತು. ಇದರಿಂದಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗುತ್ತಿತ್ತು.‌ ಆದರೆ ಈಗ ಚುನಾವಣಾ ಆಯೋಗ ಅಧಿಕಾರಿಗಳ ಅಧ್ಯಕ್ಷತೆಯ ಕಾರ್ಯ ಪಡೆ ನಿರ್ಮಿಸಿರುವುದರಿಂದ ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ತಾಲ್ಲೂಕಿನ 85 ಹಳ್ಳಿಗಳು ಅತ್ಯಂತ ಕ್ರಿಟಿಕಲ್ ಪರಿಸ್ಥಿಯನ್ನು ಎದುರಿಸುತ್ತಿವೆ. 54 ಹಳ್ಳಿಗಳಿಗೆ ಬೋರ್ ವೆಲ್ ಹಾಗೂ ಬಾವಿಗಳಿಂದ ನೀರು ತಲುಪಿಸಲಾಗುತ್ತಿದೆ. ಮುಂದಿನ ತಿಂಗಳು ಇನ್ನೂ ಭೀಕರ ಪರಿಸ್ಥಿತಿ ನಿರ್ಮಾಣವಾಗಲಿದೆ. ಹೀಗಾಗಿ ಚುನಾವಣಾ ಆಯೋಗ ತನ್ನ ನಿರ್ಧಾರವನ್ನು ಪುನರ್ ಪರಶೀಲಿಸುವಂತೆ ಅವರು ಮನವಿ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here