ವಾಡಿ; ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಆಚರಿಸಲಾಯಿತು.
ಈ ವೇಳೆ ಪುರಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ ಮೇಲು-ಕೀಳು ಎಂಬ ಜಾತಿಗಳ ಬೇಲಿಯನ್ನು ತೊಡೆದು ಈಗಿನ ಬಲಿಷ್ಠ ಭಾರತಕ್ಕೆ ನಾಂದಿ ಹಾಡಿ ಈ ಭೂಮಿ ಮೇಲೆ ಅಮರರಾಗಿ ಉಳಿದವರು ನಮ್ಮ ಡಾ. ಬಿ.ಆರ್. ಅಂಬೇಡ್ಕರ್. ಅವರು ಎಂದರು.
ಅಂಬೇಡ್ಕರ್ ಅವರು ದೇಶದ ಆಸ್ತಿ ಅವರನ್ನು ಈಗೀಗ ಕಾಂಗ್ರೆಸ್ ಪಕ್ಷ ರಾಜಕೀಯಕ್ಕಾಗಿ ತಮಗೆ ಬೇಕಾದಂತೆ ಬಳಸಿಕೊಳ್ಳುವ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಯಾವ ರೀತಿ ಗೌರವ ನೀಡಿದೆ ಎಂದು ನಾವು ಹಿಂತಿರುಗಿ ನೋಡಿದಾಗ ಗೊತ್ತಾಗುತ್ತದೆ. ಅಂಬೇಡ್ಕರ್ ಅವರು ಮನುಕುಲಕ್ಕೆ ನೀಡಿದ ಕೊಡುಗೆ ಜಗತ್ತಿನಲ್ಲೇ ಮೆರೆಯುವಂತೆ ನಮ್ಮ ಮೋದಿಜಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಮುಖಂಡ ರಾದ ರಾಜು ಮುಕ್ಕಣ್ಣ ಮಾತನಾಡಿ ಸ್ವಾತಂತ್ರ್ಯ ನಂತರ ನೆಹರು ಸರ್ಕಾರದಲ್ಲಿ ಪ್ರಥಮ ಕಾನೂನು ಸಚಿವರಾಗಿ ದೇಶಕ್ಕೆ ಸಶಕ್ತ ‘ಸಂವಿಧಾನ’ ನೀಡಿದ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ಇದು ಇಡೀ ವಿಶ್ವಕ್ಕೆ ಮಾದರಿ ಸಂವಿಧಾನವಾಗಿದೆ. ಸದಾ ಹೋರಾಟ, ವಿಚಾರಧಾರೆಗಳ ಮೂಲಕ ದೇಶಕ್ಕೆ ಶಕ್ತಿಯಾಗಿದ್ದರು.ಅವರು ರಚಿಸಿದ ಸಂವಿಧಾನದಡಿಯಲ್ಲಿ ನಾವೆಲ್ಲರೂ ಇಂದು ಬದುಕುತ್ತಿದ್ದೇವೆ.ಈಗ ಅಂಬೇಡ್ಕರ್ ಅವರು ಭೌತಿಕವಾಗಿ ಇಲ್ಲದಿರಬಹುದು ಆದರೆ ಅವರ ವಿಚಾರ ತತ್ವಗಳು ಎಂದೆಂದಿಗೂ ಅಮರವಾಗಿವೆ ಎಂದು ಹೇಳಿದರು.
ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದರು. ಎಸ್ ಸಿ ಮೂರ್ಚಾದ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಯುವ ಮುಖಂಡ ವಿಠಲ ವಾಲ್ಮೀಕ ನಾಯಕ,ರಾಮಚಂದ್ರ ರಡ್ಡಿ,ಸಿದ್ದಣ್ಣ ಕಲ್ಲಶೆಟ್ಟಿ, ಗಿರಿಮಲ್ಲಪ್ಪ ಕಟ್ಟಿಮನಿ, ಭೀಮರಾವ ದೊರೆ, ಶರಣಗೌಡ ಚಾಮನೂರ, ಹರಿ ಗಲಾಂಡೆ, ಅಶೋಕ ಪವಾರ,ಅರ್ಜುನ ಕಾಳೆಕರ,ರಿಚರ್ಡ್ ಮಾರೆಡ್ಡಿ, ಆನಂದ ಇಂಗಳಗಿ, ಮಲ್ಲಿಕಾರ್ಜುನ ಸಾತಖೇಡ, ಯಂಕಮ್ಮ ಗೌಡಗಾಂವ, ನಿರ್ಮಲ ಇಂಡಿ,ಶರಣಮ್ಮ ಯಾದಗಿರಿ, ಉಮಾಬಾಯಿ ಗೌಳಿ, ಚಂದ್ರಶೇಖರ ಬೆಣ್ಣೂರ, ಬಾಬು ಮುನ್ನಾ,ಹಣಮಂತ ಕೆಲ್ಲೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.