ಕೋಲಿ ಕಬ್ಬಲಿಗ ಸಮುದಾಯಕ್ಕೆ ಬಿಜೆಪಿಯಿಂದ ಬಹು ದೊಡ್ಡ ಅನ್ಯಾಯ ಆಗಿದೆ: ಲಚ್ಚಪ್ಪ ಜಮಾದಾರ

0
75

ಕಲಬುರಗಿ: ಸಂಸದ ಡಾ. ಉಮೇಶ ಜಾಧವ ಅವರು, ಕೋಲಿ ಕಬ್ಬಲಿಗ ಎಸ್ ಟಿ ಗೆ ಸೇರ್ಪಡೆ ಮಾಡಿಸಿಯೇ ತೀರುತ್ತೇನೆ ಎಂದು ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ. ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಮೂದಲಿಸಿದರು.

ಕೋಲಿ ಕಬ್ಬಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ವಾಪಸ್ ಕಳಿಸಿದ್ದು ಕೊಟ್ಟ ಮಾತು ಈಡೇರಿಸದೆ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬುಧವಾರ ಸುದ್ದಿ ಗೋಷ್ಠಿಯಲ್ಲಿ ದೂರಿದರು.

Contact Your\'s Advertisement; 9902492681

‘ಮೈ ಕೋಲಿ ಸಮಾಜ ಕೋ ಯಾದರಕೇಂಗೆ’ ಎಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ಹಾಗೂ ಸಂಸದ ಜಾಧವ, ಎಂಎಲ್ಸಿ ಎನ್. ರವಿಕುಮಸರ ಅವರು ಕೋಲಿ ಕಬ್ಬಲಿಗ ಸಮಾಜಕ್ಕೆ ಬಹು ದೊಡ್ಡ ಅನ್ಯಾಯ ಮಾಡಿದೆ ಎಂದು ಆಪಾದಿಸಿದರು.

ಈ ಬಾರಿಯ ಲೋಕಸಭಾ ಚುನಾವಣೆಲ್ಲಿ ಈ ಬಗ್ಗೆ ಮಾತನಾಡದ ಬಿಜೆಪಿ ಮುಖಂಡರು ಹಾಗೂ ಸಂಸದರು, ಚರ್ಚೆಯ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯಲ್ಲಿ ಗೈರು ಹಾಜರಾಗಿದ್ದರು ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ. ಜಾಧವ ಅವರಿಗೆ ನೈತಿಕತೆ ಅನ್ನವುದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಕೋಲಿ ಸಮಾಜ ಬಾಂಧವರಿಗೆ ಕ್ಷಮೆ ಯಾಚಿಸಬೇಕಿತ್ತು. ಅದನ್ನು ಬಿಟ್ಟು ಇನ್ನೊಬ್ಬರ ಮೇಲೆ ಗೂಬೆ ಕೂಡಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಮಲಿಂಗ ನಾಟೀಕರ್, ಪಿಂಟು ಜಮಾದಾರ, ಭೀಮಶಾ ಖನ್ನಾ, ದೇವಿಂದ್ರ ಜಮಾದಾರ, ಮಲ್ಲಿಕಾರ್ಜುನ ಗುಡಬಾ, ಶಿವು ಧಣಿ, ಅಂಬಾರಾಯ ಜವಳಗಾ, ಹಣಮಂತ ಸಂಕನೂರ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here