ಮೇ೭ರಂದು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಲು ಡಿಸಿ ಕರೆ

0
31

ಕಲಬುರಗಿ: ೨೦೨೪ರ ಲೋಕಸಭಾ ಚುನಾವಣೆ ಮೇ. ೭ ರಂದು ಜರುಗಲಿದ್ದು, ಪ್ರತಿಯೊಬ್ಬರು ಮತದಾನ ಕಡ್ಡಾಯವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಕರೆ ನೀಡಿದರು

ಬುಧವಾರದಂದು ಎನ್.ವಿ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು.

Contact Your\'s Advertisement; 9902492681

ಸ್ವೀಪ್ ಕಾರ್ಯಕ್ರಮದ ಮುಖಾಂತರ ಎಲ್ಲಾ ಜನರಲ್ಲಿ ಅರಿವು ಮೂಡಿಸುವುದು ನಾವೆಲ್ಲರೂ ಸೇರಿ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಮತದಾನ ಮಾಡುವುದು ನಮ್ಮಲ್ಲರ ಮೂಲಭೂತ ಹಕ್ಕಾಗಿದೆ ಎಂದರು.

ಮತದಾನ ಪ್ರಮಾಣ ಹೆಚ್ಚಿಸಲು ಸತತವಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳವುದರ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮೇ. ೭ ರಂದು ಮತದಾನ ಎಲ್ಲರೂ ತಪ್ಪದೇ ಮತದಾನ ಮಾಡಬೇಕು.ತಮ್ಮ ಮನೆಯ ಅಕ್ಕ ಪಕ್ಕ ಜನರಿಗೆ ಸಹ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಈಗಾಗಲೇ ಜಿಲ್ಲಾಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಹಲವಾರು ಬಾರಿ ಹಮ್ಮಿಕೊಳ್ಳಲಾಗಿದೆ ಎಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿದೆ ಅಲ್ಲಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಜಿಲ್ಲಾಪAಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬೇಕೆಂದರು. ಪ್ರತಿಯೊಬ್ಬ ಶಿಕ್ಷಕರು ಮತದಾನದ ಜಾಗೃತಿ ಮೂಡಿಸುವುದರ ಮೂಲಕ ಮತ ಚಲಾವಣೆಯ ಪ್ರಮಾಣ ಹೆಚ್ಚಿಸಬೇಕೆಂದರು.

ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ. ಆಕಾಶ ಅವರು ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು. ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ದೇವಿದಾಸ ಪಾಟೀಲ ಪ್ರತಿಯೊಬ್ಬರು ಜವಾಬ್ದಾರಿಯಿಂದ ಮತ ಚಲಾಯಿಸಬೇಕೆಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪಗೌಡ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕ ಶಿಕ್ಷಕಿಯರು ಜಿಲ್ಲಾ ಪಂಚಾಯತ್ ಕಾರ್ಯಾಲಯದ ಸಿಬ್ಬಂದಿಗಳು ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿಗಳು ಅಪರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here