ಎಕ್ಸಿ್ಟ್ ಪೋಲ್ ಪ್ರಸಾರಕ್ಕೆ ನಿರ್ಬಂಧ: ಡಿ.ಸಿ ಬಿ.ಫೌಜಿಯಾ ತರನ್ನುಮ್

0
30

ಕಲಬುರಗಿ: ಸಾರ್ವತ್ರಿಕ ಲೋಕಸಭೆ ಚುನಾವಣೆ-2024ಕ್ಕೆ‌ ಸಂಬಂಧಿಸಿದಂತೆ ಗುಲಬರ್ಗಾ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಸೇರಿ ದೇಶದಾದ್ಯಂತ ಒಟ್ಟು 7 ಹಂತದಲ್ಲಿ ಮತದಾನ ನಡೆಯಲಿದ್ದು, ಜನಪ್ರತಿನಿಧಿ ಕಾಯ್ದೆ-1951ರ 126(ಎ) ಪ್ರಕಾರ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದಲ್ಲಿ ಎಕ್ಸಿಟ್ ಪೋಲ್‌ ಪ್ರಸಾರಕ್ಕೆ ನಿರ್ಬಂಧಿಸಲಾಗಿದೆ‌ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಅಧ್ಯಕ್ಷೆ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಏಪ್ರಿಲ್ 19 ರಂದು‌ ಮೊದಲನೇ ಹಂತದ ಮತದಾನ ಮತ್ತು ಜೂನ್ 1ಕ್ಕೆ ಕೊನೆ ಹಂತದ‌ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಏಪ್ರಿಲ್ 19ರ ಬೆಳಿಗ್ಗೆ 7 ಗಂಟೆಯಿಂದ ಜೂನ್ 1 ರ ಸಾಯಂಕಾಲ 6.30 ಗಂಟೆ ವರೆಗೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು‌ ಮತದಾನ್ನೋತ್ತರ ಸಮೀಕ್ಷ ಪ್ರಸಾರ ಮಾಡುವಂತಿಲ್ಲ‌ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಇದಲ್ಲದೆ ಜನಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 126(1)(ಬಿ) ಪ್ರಕಾರ ಸಹ ಮತದಾನದ ಕೊನೆ‌ 48 ಗಂಟೆ ಅವಧಿಯಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಅಭಿಪ್ರಾಯ ಸಂಗ್ರಹಣೆ ಅಥವಾ ಯಾವುದೇ ಇತರ ಸಮೀಕ್ಷೆಯ ಫಲಿತಾಂಶಗಳನ್ನು ಒಳಗೊಂಡಂತೆ ಚುನಾವಣಾ ವಿಷಯವನ್ನು ಪ್ರದರ್ಶಿಸುವುದನ್ನು ಸಹ ನಿಷೇಧಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here