ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಿ

0
17

ಶಹಾಬಾದ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ನಗರಾಭಿವೃದ್ಧಿ ಕೋಶ ಹಾಗೂ ತಾಲೂಕ ಆಡಳಿತ, ಸ್ವೀಪ್ ಸಮಿತಿ ಮತ್ತು ನಗರ ಸಭೆ ಶಹಾಬಾದ ವತಿಯಿಂದ ನಗರ ಸಭೆಯ ಮುಂಭಾಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಮತ್ತು ನಗರಸಭೆಯ ಪೌರಾಯುಕ್ತ ಡಾ. ಗುರುಲಿಂಗಪ್ಪ ರವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

‘ನಿಮ್ಮ ಮತ ನಿಮ್ಮ ಹಕ್ಕು, ಜಾಗತ ಮತದಾರ, ಸದಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಶಿಕ್ಷಾರ್ಹ. ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಂಡು ಮತದಾನ ಮಾಡಿ’ ಎಂಬ ಘೋಷ ವಾಕ್ಯಗಳು ಅಭಿಯಾನದಲ್ಲಿ ಮೊಳಗಿದವು.
ಬೈಕ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ , ನಗರದಲ್ಲಿ ಯಾವೊಬ್ಬ ಮತದಾರನೂ ಆಮೀಷಕ್ಕೆ ಒಳಗಾಗದೆ ಎಲ್ಲರೂ ತಪ್ಪದೆ ಮತ ಚಲಾಯಿಸುವಂತಾಗಬೇಕು, ಅದಕ್ಕೆ ಎಲ್ಲಾ ಯುವ ಸಮೂಹ ಕೈಜೋಡಿಸಬೇಕು. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದಾಗ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳಾಗಲು ಸಾಧ್ಯ .ಆ ನಿಟ್ಟಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

Contact Your\'s Advertisement; 9902492681

ಪೌರಾಯುಕ್ತ ಡಾ.ಕೆ. ಗುರುಲಿಂಗಪ್ಪ ಮಾತನಾಡಿ, ಶೇ.100ರಷ್ಟು ಮತದಾನವಾಗುವುದರಿಂದ ಸದಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು. ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸುವುದಲ್ಲದೆ. ತಮ್ಮ ನೆರೆಹೊರೆಯವರಿಗೂ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು.ಜನರು ಹೆಚ್ಚು ಮತದಾನದಲ್ಲಿ ಪಾಲ್ಗೊಳ್ಳುವುದರಿಂದ ಜನರಿಗೆ ಬೇಕಾದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅನುಕೂಲವಾಗುತ್ತದೆ ಎಂದರು.

ಉಪ ತಹಶೀಲ್ದಾರ್ ಮಲ್ಲಿಕಾರ್ಜುನ ರೆಡ್ಡಿ, ತಾ. ಪಂ ಇಒ ಮಲ್ಲಿನಾಥ ರಾವೂರ, ಸಿಡಿಪಿಓ ಡಾ. ವಿಜಯಲಕ್ಷ್ಮಿ ಹೇರೂರ, ಮೀನಾಕ್ಷಿ ಗುಂಡಗುರ್ತಿ, ಶಕುಂತಲಾ ಸಾಕ್ರೆ, ತಾ. ಪಂ ಯ ಈರಣ್ಣ ಸಾತಖೇಡ, ಸಂತೋಷ, ನಗರ ಸಭೆಯ ಶರಣಗೌಡ ಪಾಟೀಲ, ರಘುನಾಥ ನರಸಾಳೆ, ಮಹ್ಮದ ಮೈನೋದ್ದಿನ್, ಜೆಇ ಸೊಂಪುರ, ರಬ್ಬಾನಿ, ಸಾಬಣ್ಣ ಸುಂಗಲಕರ, ಸುರೇಶ, ನಾರಾಯಣ ರೆಡ್ಡಿ, ಶಿವಕುಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here