ಕಲಬುರಗಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಚಿತ್ತಾಪುರ ಮತಕ್ಷೇತ್ರದ ಭೀಮನಹಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದ ಜನರ ಕುಟುಂಬದ ನಿರ್ವಹಣೆ ಹಾಗೂ ಆರ್ಥಿಕ ಸ್ಥಿರತೆ ರೂಪಿಸುವ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿಸಲು ಬಿಜೆಪಿ ಹುನ್ನಾರ ನಡೆಸಿದೆ. ಬಿಜೆಪಿ ರಾಜ್ಯ ಧ್ಯಕ್ಷ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿ ಸದರಿ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಕೋರಿದ್ದಾರೆ. ” ಬಿಜೆಪಿ ನಾಯಕರೇ,ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ನಿಲ್ಲಿಸುವ ಯತ್ನ ಮಾಡಿದ್ದೀರಲ್ಲ. ಬಡವರು ಕಂಡರೆ ಯಾಕೆ ನಿಮಗೆ ಅಸಮಾಧಾನ” ? ನಾವು ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದರು.
ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಳ್ಳಿ ಮಾತನಾಡಿ ನೀವೆಲ್ಲ ಆಶೀರ್ವಾದ ಮಾಡಿ ರಾಧಾಕೃಷ್ಣ ಅವರನ್ನು ಗೆಲ್ಲಿಸಿದರೆ ಅವರು ನಿಮ್ಮ ಮನೆಯವರಲ್ಲಿ ಒಬ್ಬರಂತೆಕೆಲಸ ಮಾಡಲಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಗನಗೌಡ ಪಾಟೀಲ ರಾಮತೀರ್ಥ ಸೇರಿದಂತೆ ಹಲವರಿದ್ದರು.