ಕೋಟನೂರು ಡಿ ಮನೆ ಮೇಲೆ ಹಲ್ಲೆ ಪ್ರಕರಣ: ಕಿಡಿಗೇಡಿಗಳಿಗೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ 

0
93

ಕಲಬುರಗಿ: ಕೋಟನೂರು ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾನೂನು ಕೈಗೆತ್ತಿಕೊಂಡವರನ್ನು ಈಗಾಗಲೇ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಹಾಗಾಗಿ, ಸಾರ್ವಜನಿಕರು ಯಾವುದೆ ಕಾರಣಕ್ಕೂ ಭಾವೋಗ್ವೇಗಕ್ಕೆ ಒಳಗಾಗದಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ‌.

ಈ‌ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಸಚಿವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕೋಟನೂರು ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂದಪಟ್ಟವರನ್ನು ಈಗಾಗಲೇ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಹಾಗಾಗಿ, ಯಾರೊಬ್ಬರು ಆತಂಕಕ್ಕೊಳಗಾಗಬಾರದು. ಕಾನೂನು ವ್ಯಾಪ್ತಿ ಮೀರಿ ನಡೆದುಕೊಳ್ಳುವವರು ಯಾರೇ ಆಗಿರಲಿ ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here