ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ನೇಮಕಗೊಂಡ ಡಾ. ಅನಿಲಕುಮಾರ ಬಿಡವೆ

0
185

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲಕುಮಾರ್ ಬಿಡವೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಉನ್ನತೀಕರಿಸಲಾಗಿದೆ. ಅದೇ ರೀತಿ ಭಾμÁ ನಿಕಾಯದ ಡೀನ್ ಡಾ. ಎಸ್. ಜಿ. ಡೊಳ್ಳೇಗೌಡರನ್ನೂ ಉನ್ನತೀಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ ಮಾಡಲಾಗಿದೆ.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಡಾ. ಬಿಡವೆ ಮತ್ತು ಡಾ. ಡೊಳ್ಳೇಗೌಡರ ನೇಮಕದ ಕುರಿತು ಔಪಚಾರಿಕ ಪ್ರಕಟಣೆಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ನೆರವೇರಿಸಿದರು.

Contact Your\'s Advertisement; 9902492681

ಕಲಬುರಗಿ ನಗರದಲ್ಲಿ ಬುಧವಾರ ನಿರ್ಗಮಿತ ಉಪಕುಲಪತಿ ಡಾ. ನಿರಂಜನ್ ವಿ ನಿಷ್ಠಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಡಾ. ಎಸ್.ಎಚ್.ಹೊನ್ನಳ್ಳಿ ಅವರನ್ನು ಕುಲಸಚಿವ (ಮೌಲ್ಯಮಾಪನ) ಆಗಿ ನೇಮಕ ಮಾಡುವುದಾಗಿ ಮತ್ತು ಡಾ. ಲಕ್ಷ್ಮೀ ಪಾಟೀಲ್ ಮಾಕಾ ಅವರನ್ನು ವಿಶ್ವವಿದ್ಯಾಲಯದ ಡೀನ್ ಮತ್ತು ಪೆÇ್ರ. ಕಿರಣ ಮಾಕಾ ಅವರನ್ನು ಹಣಕಾಸು ಅಧಿಕಾರಿಯಾಗಿ ಇನ್ನೂ ಒಂದು ಅವಧಿಗೆ ಮುಂದುವರಿಸುವುದಾಗಿ ಪ್ರಕಟಿಸಿದರು.

ಕಲಬುರಗಿ ನಗರದಲ್ಲಿ ಗುರುವಾರ ಶರಣಬಸವ ವಿಶ್ವವಿದ್ಯಾಲಯದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಹಾಗೂ ವಿವಿಯ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ಹಣಕಾಸು ಅಧಿಕಾರಿ ಪ್ರೊ. ಕಿರಣ ಮಾಕಾ ಸೇರಿದಂತೆ ಮತ್ತಿತರ ಅಧಿಕಾರಿಗಳ ಸಮ್ಮುಖದಲ್ಲಿ ಡಾ. ಬಿಡವೆ ಮತ್ತು ಡಾ. ಎಸ್. ಜಿ. ಡೊಳ್ಳೇಗೌಡರ್ ಅನುಕ್ರಮವಾಗಿ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ಎಂಬ ಪುಟ್ಟ ಹಳ್ಳಿಯಿಂದ ಬಂದಿರುವ ಡಾ. ಬಿಡವೆ ಅವರು ಮಹಾರಾಷ್ಟ್ರದ ಔರಂಗಾಬಾದ್‍ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಪ್ರಮುಖವಾಗಿ ಭೌತಶಾಸ್ತ್ರದಲ್ಲಿ ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಅದೇ ವರ್ಷ ಲೇಸರ್ ಪ್ರೇರಿತ ಪ್ಲಾಸ್ಮಾ ಅಧ್ಯಯನಗಳ ಕುರಿತು ಅವರ ಪ್ರಬಂಧಕ್ಕಾಗಿ 2000ನೇ ಇಸವಿಯಲ್ಲಿ ಅದೇ ವಿಶ್ವವಿದ್ಯಾಲಯದಿಂದ ಪಿಎಚ್‍ಡಿ ಪದವಿ ಪಡೆದಿದ್ದಾರೆ. ಡಾ. ಬಿಡವೆ ಅವರು ಗುಜರಾತ್, ಮಹಾರಾಷ್ಟ್ರ ಮತ್ತು ಕಲಬುರಗಿಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ ಮತ್ತು ಸುಮಾರು 22 ವರ್ಷಗಳ ಹಿಂದೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ನಡೆಸುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಭೌತಶಾಸ್ತ್ರ ಶಿಕ್ಷಕರಾಗಿ ತಮ್ಮ ಮೊದಲ ಸೇವೆ ಆರಂಭಿಸಿದ್ದಾರೆ.

ಸಂಪೂರ್ಣ ಕಠಿಣ ಪರಿಶ್ರಮದಿಂದ ಡಾ. ಬಿಡವೆ ಅವರು ಭೌತಶಾಸ್ತ್ರ ಶಿಕ್ಷಕ ವೃತ್ತಿಯಿಂದ, ಅಪ್ಪಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ಪ್ರಾಂಶುಪಾಲರಾಗಿ ನಂತರ ಶರಣಬಸವ ವಿಶ್ವವಿದ್ಯಾಲಯದೊಂದಿಗೆ ವಿಲೀನಗೊಂಡರು ಮತ್ತು ಶರಣಬಸವ ವಿಶ್ವವಿದ್ಯಾಲಯವು 2017 ರಲ್ಲಿ ಅಸ್ತಿತ್ವಕ್ಕೆ ಬಂದಾಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕಗೊಂಡರು. ಆಗ ಶಿಕ್ಷಕರಾಗಿ ಅವರ ಸೇವೆ ಮತ್ತು ಶ್ರಮವನ್ನು ಗುರುತಿಸಿದ ಪೂಜ್ಯ ಡಾ. ಅಪ್ಪಾಜಿ ಅವರಿಗೆ ಪ್ರತಿಷ್ಠಿತ “ದಾಸೋಹ ಜ್ಞಾನ ರತ್ನ” ಪ್ರಶಸ್ತಿ ನೀಡಿ ಆರು ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡಿ ಗೌರವಿಸಿದರು.

ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡ ಡಾ. ಎಸ್. ಜಿ. ಡೊಳ್ಳೇಗೌಡರು ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂಗ್ಲೀμïನಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ, ಶೂನ್ಯ ಸಂಪಾದನೆ ಕುರಿತ ಪ್ರಬಂಧಕ್ಕಾಗಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಿಎಚ್‍ಡಿ ಪದವಿ ಪಡೆದಿದ್ದಾರೆ. ಅವರ ಆಳವಾದ ಅಧ್ಯಯನ, ಸಾಹಿತ್ಯ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿ, ಡಾ. ಡೊಳ್ಳೇಗೌಡರಿಗೆ 2022 ರಲ್ಲಿ ಶರಣಬಸವ ವಿಶ್ವವಿದ್ಯಾಲಯವು ಡಿ.ಲಿಟ್ (ಗೌರವ) ಪದವಿ ನೀಡಿ ಗೌರವಿಸಿದೆ.

ಡಾ. ಡೊಳ್ಳೇಗೌಡರು ಸುಮಾರು ನಾಲ್ಕು ದಶಕಗಳ ಕಾಲ ಶಿಕ್ಷಕರಾಗಿ ಅಪಾರ ಅನುಭವವನ್ನು ಹೊಂದಿದ್ದಾರೆ ಮತ್ತು ಸುಮಾರು 10 ವರ್ಷಗಳ ಕಾಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಹೀಗೆ ಮೂರು ಕಾಲೇಜುಗಳ ಪ್ರಾಂಶುಪಾಲರಾಗಿ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಅವರು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಕೌನ್ಸಿಲ್ (ಓಂಂಅ) ಪೀರ್ ತಂಡದ ಸದಸ್ಯರಾಗಿದ್ದಾರೆ ಮತ್ತು ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೌಲ್ಯಮಾಪನಕ್ಕಾಗಿ ಅಸ್ಸಾಂ, ಮಹಾರಾಷ್ಟ್ರ, ಕೇರಳ, ತೆಲಂಗಾಣ ಮತ್ತು ಇತರ ರಾಜ್ಯಗಳ ಹಲವಾರು ಕಾಲೇಜುಗಳಿಗೆ ಭೇಟಿ ನೀಡಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ನಡೆಯುತ್ತಿರುವ ಐದು ಕಾಲೇಜುಗಳ ಸ್ವಯಂ ಅಧ್ಯಯನದ ಐದು ವರದಿಗಳನ್ನೂ ಸಿದ್ಧಪಡಿಸಿದ ಕೀರ್ತಿ ಇವರದ್ದಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here