ಸುರಪುರ: ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ದಸಂಸ ಪ್ರತಿಭಟನೆ

0
38

ಸುರಪುರ: ಈ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆಯು ಕೊನೆ ಸ್ಥಾನದಲ್ಲಿದ್ದು ಶಿಕ್ಷಣ ಗುಣಮಟ್ಟ ಕುಸಿತ ಪರಿಣಾಮ ಜಿಲ್ಲೆಯ ಸರಕಾರಿ ಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆಯೇ ಪ್ರಮುಖ ಕಾರಣವಾಗಿದ್ದು ಕೂಡಲೇ ಸರಕಾರಿ ಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಕ್ರಾಂತಿಕಾರಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿ, ಜಿಲ್ಲೆಯಾದ್ಯಂತ ಸರಕಾರಿ ಶಾಲೆಗಳು ಹಾಗೂ ವಿವಿಧ ವಸತಿ ಶಾಲೆಗಳಲ್ಲಿ ಖಾಯಂ ಶಿಕ್ಷಕರು ಇಲ್ಲದೇ ಹಾಗೂ ಅನೇಕ ಶಾಲೆಗಳಲ್ಲಿ ಪ್ರಮುಖವಾಗಿ ಗಣಿತ,ಇಂಗ್ಲೀಷ್ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗದಂತಾಗಿದೆ ಶಿಕ್ಷಕರಿಲ್ಲದೇ ಮಕ್ಕಳು ಕಲಿಯುವುದಾದರೂ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಜಿಲ್ಲೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ ಹಾಗೂ ಬೇಜವಾಬ್ದಾರಿತನದಿಂದಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊರ ಜಿಲ್ಲೆಗಳ ಶಿಕ್ಷಕರು ರಾಜಕೀಯ ಪ್ರಭಾವ ಬೀರಿ ತಮ್ಮ ಮೂಲ ಜಿಲ್ಲೆಗಳಿಗೆ ದೊಡ್ಡ ಸಂಖ್ಯೆಯಲ್ಲಿ ವರ್ಗಾವಣೆಗೊಂಡಿದ್ದಾರೆ ಇದರಿಂದ ಜಿಲ್ಲೆಯ ನೂರಾರು ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಬೀಳುವಂತಾಗಿದ್ದು ನಮ್ಮ ಜಿಲ್ಲೆಯ ಮಕ್ಕಳು ಶಿಕ್ಷಣದಿಂದ ವಂಚಿತಗೊಳ್ಳಲು ಕಾರಣವಾಗಿದೆ ಎಂದು ಆರೋಪಿಸಿದರು.

ಹೊರ ಜಿಲ್ಲೆಯವರು ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿ ಬಯಸಿ ಅರ್ಜಿ ಸಲ್ಲಿಸಿ ನೇಮಕಾತಿ ಹೊಂದಿದ ನಂತರ ಈ ಭಾಗದಲ್ಲಿಯೇ ಸೇವೆ ಸಲ್ಲಿಸಿ ನಿವೃತ್ತಿ ಹೊಂದುವಂತೆ ಸರಕಾರ ನಿಯಮಗಳನ್ನು ರೂಪಿಸುವಂತೆ ಒತ್ತಾಯಿಸಿದ ಅವರು
ಮುಂಬರುವ 2024-25ನೇ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಲು ಹಾಗೂ ಸರಕಾರಿ ಶಾಲೆಗಳ ಉಳಿವಿಗಾಗಿ ಜಿಲ್ಲೆಯ ಸರಕಾರಿ ಶಾಲೆಗೂ ಹಾಗೂ ಎಲ್ಲಾ ವಸತಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು ಮನವಿಗೆ ಸ್ಪಂದಿಸದಿದ್ದಲ್ಲಿ ಮುಂಬರುವ ದಿನಗಳಲ್ಲಿ ಜಿಲ್ಲಾ ಕೇಂದ್ರದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾರ ಮಲ್ಲಯ್ಯ ದಂಡು ಅವರಿಗೆ ಸಲ್ಲಿಸಲಾಯಿತು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಮುಖಂಡರಾದ ಮಹಾದೇವಪ್ಪ ಬಿಜಾಸ್ಪುರ, ಮೂರ್ತಿ ಬೊಮ್ಮನಹಳ್ಳಿ ಮಾತನಾಡಿದರು.

ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ ಶೆಳ್ಳಗಿ,ಮಲ್ಲಿಕಾರ್ಜುನ ಕುರಕುಂದಿ,ಮಾನಪ್ಪ ಬಿಜಾಸಪುರ,ಮರೆಪ್ಪ ಹಾಲಗೇರಾ,ಹನುಮಂತಪ್ಪ ಮಹಲರೋಜಾ,ರಾಮಣ್ಣ ಶೆಳ್ಳಗಿ,ಜಟ್ಟೆಪ್ಪ ನಾಗರಾಳ,ಬಸವರಾಜ ಗೋನಾಲ,ಖಾಜಾ ಹುಸೇನ ಗುಡಗುಂಟಿ,ಮರಿಲಿಂಗಪ್ಪ ನಾಟೇಕಾರ,ಮರೆಪ್ಪ ಕಾಂಗ್ರೆಸ್ ಶರಣಪ್ಪ ಬೊಮ್ಮನಹಳ್ಳಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here