ಪ್ರಜ್ವಲ್ ರೇವಣ್ಣ ಬಂಧಿಸಲು ಆಗ್ರಹಿಸಿ ಹೋರಾಟದ ನಡಿಗೆ ಹಾಸನ ಕಡೆಗೆ ಎಸ್ಎಫ್ಐ ಬೆಂಬಲ

0
26

ರಾಯಚೂರು: ಪ್ರಜ್ವಲ್ ರೇವಣ್ಣ ಬಂಧಿಸಲು ಆಗ್ರಹಿಸಿ ಮೇ 30 ರಂದು ಹಾಸನದಲ್ಲಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದಿಂದ ನಡೆಯಲಿರುವ “ಹೋರಾಟದ ನಡಿಗೆ ಹಾಸನ ಕಡೆಗೆ” ಬೃಹತ್ ಹೋರಾಟ ಹೋರಾಟವನ್ನು ಬೆಂಬಲಿಸಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಎಸ್ಎಫ್ಐ ರಾಯಚೂರು ಜಿಲ್ಲಾ ಸಮಿತಿ ಕರೆ ನೀಡಿದೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ನಡೆಸಿರುವ ವಿಕೃತ ಲೈಂಗಿಕ ದೌರ್ಜನ್ಯ, ಅತ್ಯಾಚಾರಗಳ ವಿರುದ್ಧ ಈಗಾಗಲೇ ಅತ್ಯಂತ ವ್ಯಾಪಕವಾಗಿ ತೀವ್ರ ಆಕ್ರೋಶ ಮತ್ತು ಪ್ರತಿಭಟನೆ ವ್ಯಕ್ತವಾಗಿದೆ.

Contact Your\'s Advertisement; 9902492681

ಎಸ್ಎಫ್ಐ ಸೇರಿದಂತೆ ಅನೇಕ ಮಹಿಳಾ ಸಂಘಟನೆ, ಜನಪರ ಸಂಘಟನೆಗಳು ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಈಗಾಗಲೇ ಎಸ್ಐಟಿ ರಚಿಸಿ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ನಡುವೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರಕರಣದ ದಿಕ್ಕು ತಪ್ಪಿಸಲು ಹಾಗೂ ಪ್ರಕರಣದ ತನಿಖೆಯನ್ನು ಎಸ್ಐಟಿ ಬದಲು ಸಿಬಿಐ ಗೆ ವಹಿಸುವಂತೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ವಿಶ್ವಾಸ ಕುಗ್ಗಿಸಿ ಅವರು ಎಸ್ಐಟಿ ಮುಂದೆ ಹಾಜರಾಗದಂತ ಪರಿಸ್ಥಿತಿ ಸೃಷ್ಟಿಸುತ್ತಿವೆ. ಕಾಂಗ್ರೇಸ್ ಪಕ್ಷ ಮತ್ತು ರಾಜ್ಯದ ಕಾಂಗ್ರೇಸ್ ಸರ್ಕಾರ ಕೂಡ ಈ ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರದ ಆಚೆಗೆ ಸಂತ್ರಸ್ತ ಮಹಿಳೆಯರ ರಕ್ಷಣೆ, ಪುನರ್ವಸತಿ ಹಾಗೂ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಚಿತ್ರೀಕರಣ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ ಮತ್ತು ಲೈಂಗಿಕ ವೀಡಿಯೋಗಳನ್ನು ಸಾರ್ವಜನಿಕವಾಗಿ ಬಿತ್ತರಿಸಿರುವವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲು ಬೇಕಾದ ಸೂಕ್ಷ್ಮತೆ, ಪ್ರಬುದ್ಧತೆ ಮತ್ತು ದಿಟ್ಟತನವನ್ನು ತೋರಿಸಬೇಕಿದೆ ಎಂದು ಎಸ್ಎಫ್ಐ ಹೇಳಿದೆ.

ಪ್ರಜ್ವಲ್ ರೇವಣ್ಣ ಮತ್ತು ವೀಡಿಯೋಗಳನ್ನು ಹಂಚಿದವರನ್ನು ಕೂಡಲೇ ಬಂಧಿಸುವಂತೆ, ದೌರ್ಜನ್ಯಕ್ಕೊಳಗಾದ ಸಂತ್ರಸ್ಥ ಮಹಿಳೆಯರಿಗೆ ರಕ್ಷಣೆ ನೀಡಿ ಗೌಪ್ಯತೆ ಮತ್ತು ಘನತೆ ಕಾಪಾಡುವಂತೆ ಹಾಗೂ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಯಾವುದೇ ರಾಜಕೀಯ ಮತ್ತು ಪ್ರಭಾವಿಗಳ ಒತ್ತಡಗಳಿಗೆ ಒಳಗಾಗದಂತೆ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಮತ್ತು ನಿರ್ಧಿಷ್ಟ ಕಾಲಮಿತಿಯೊಳಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿ ಈಗಾಗಲೇ ಎಸ್ಎಫ್ಐ ರಾಜ್ಯ ಸಮಿತಿಯ ಹೋರಾಟ ರೂಪಿಸಿ ಎಲ್ಲಾ ಜಿಲ್ಲಾ ಸಮಿತಿಗಳಿಂದ ಸರಕಾರಕ್ಕೆ ಮನವಿ ಕೊಡುವುದು ಹಾಗೂ ಪತ್ರಿಕಾ ಹೇಳಿಕೆಗಳನ್ನು ಕೊಡಲಾಗಿದೆ.

ಇಷ್ಟಾದರೂ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದು, ಕುಟುಂಬಸ್ಥರು ತನಿಖೆ ದಿಕ್ಕು ತಪ್ಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ಸಂತ್ರಸ್ಥ ಮಹಿಳೆಯರ ಪರಿಸ್ಥಿತಿ ನಿಕೃಷ್ಟವಾಗುತ್ತಿದ್ದು, ಅವರ ರಕ್ಷಣೆ ಹಾಗೂ ಪುನರ್ವಸತಿಗೆ ಆದ್ಯತೆ ನೀಡಬೇಕಿದೆ ಎಂದು ಆಗ್ರಹಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಎಸ್ಎಫ್ಐ ಕಾರ್ಯಕರ್ತರು ಮೇ 30 ರಂದು ಹಾಸನದಲ್ಲಿ ನಡೆಯುವ ಐಕ್ಯ ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಎಸ್ಎಫ್ಐ ವಿದ್ಯಾರ್ಥಿನಿಯರ ಉಪ ಸಮಿತಿಯ ರಾಜ್ಯ ಸಮಿತಿ ಸದಸ್ಯೆ ಸುಮಿತ್ರ ಬಿ.ಆರ್. ಗುಂಡ, ಶಂಕ್ರಮ್ಮ, ಬಸಮ್ಮ ಕರೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here