ಸುರಪುರ:ಕನ್ನಡ ನಾಡು ನುಡಿಯ ಬೆಳವಣಿಗೆಗಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸುವ ಮೂಲಕ ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಹತ್ವದ ಕಾರ್ಯವನ್ನು ಮಾಡಿದ್ದಾರೆ ಎಂದು ಸುರಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣಬಸಪ್ಪ ಯಾಳವಾರ ಮಾತನಾಡಿದರು.
ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಕಸಾಪ ವತಿಯಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಮತ್ತು ಸಾಹಿತಿಗಳ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪ್ರಮುಖ ಪಾತ್ರ ವಹಿಸುತ್ತಿದ್ದು ಸಂಸ್ಥಾನದ ಮಿರ್ಜಾ ಇಸ್ಮಾಯಿಲ್, ಸರ್ ಎಂ ವಿಶ್ವೇಶ್ವರಯ್ಯನವರ ಪಾತ್ರ ಪ್ರಮುಖವಾಗಿದೆ ಎಂದರು.
ಗೌರವಕೋಶಾಧ್ಯಕ್ಷರಾದ ವೆಂಕಟೇಶ ಪಾಟೀಲ್ ನಿರೂಪಿಸಿದರು, ಗೌರವ ಕಾರ್ಯದರ್ಶಿ ದೊಡ್ಡ ಮಲ್ಲಿಕಾರ್ಜುನ್ ಹುದ್ದಾರ್ ಸ್ವಾಗತಿಸಿದರು ಶ್ರೀಶೈಲ್ ಯಂಕಂಚಿ ಶಿಕ್ಷಕರು ವಂದಿಸಿದರು.
ಯಲ್ಲಪ್ಪ ಹುಲಿಕಲ್ ನ್ಯಾಯವಾದಿಗಳು, ರಾಘವೇಂದ್ರ ಭಕ್ರಿ, ಪ್ರೇಮ್ ಜಿ ಹುಲಿಕಲ್, ಸೇರಿದಂತೆ ಹಲವಾರು ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.