ಕಲಬುರಗಿ: ಕಸಾಪ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೇಯರ್ ಜನ್ಮದಿನಾಚರಣೆ

0
28

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸುವ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ಕಾರ್ಯ ಮಾಡಿದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೇಯರ್ ಅವರು ನಮ್ಮ ಕನ್ನಡ ನಾಡಿನ ಭಾಗ್ಯವಿದಾತ ಎಂದು ಕರೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಮಂಗಳವಾರ ಏರ್ಪಡಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೇಯರ್ ಅವರ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪಷ್ಪಾರ್ಪಣೆ ಮಾಡಿ ಮಾತನಾಡಿದರು.

Contact Your\'s Advertisement; 9902492681

ನಾಲ್ವಡಿ ಕೃಷ್ನರಾಜ ಪಡೇಯರ್ ಅವರು ತಮ್ಮ ದೇಹದಲ್ಲಿ ಉಸಿರಿರುವ ತನಕವೂ ಜನ ಸೇವೆಗಾಗಿ ದುಡಿದಿದ್ದಾರೆ. ಇವರ ಆಲೋಚನೆ, ಮುಮದಾಲೋಚನೆಗಳಿಂದಲೇ ನಮ್ಮ ಕನ್ನಡ ನಾಡು ಇಂದಿಗೂ ನೆಮ್ಮದಿಯ ತಾಣವಾಗಿದೆ. ಹೀಗಾಗಿ ಶಿಕ್ಷಣ, ಉದ್ಯೋಗ, ಕೃಷಿ, ಉದ್ಯಮ, ಸಾಹಿತ್ಯ, ಕಲೆ, ಸಾಂಸ್ಕøತಿಕ ಕ್ಷೇತ್ರಗಳಿಗೆ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಪಡೇಯರ್ ಅವರು ಕೊಟ್ಟ ಕೊಡುಗೆ ಅಮೋಘವಾದುದಾಗಿದೆ ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೇಯರ್ ರವರ ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ ನ್ನು ಸಂಸ್ಥಾಪನೆಗೊಳ್ಳಲು ಪ್ರಮುಖ ಕಾರಣರಾಗಿದ್ದರು. ಆ ದಿನಗಳಿಂದ ಇಂದಿನವರೆಗೂ ಹಲವು ಮಹನೀಯರು ಕನ್ನಡ ಕಟ್ಟುವ ಕಾಯಕದಲ್ಲಿ ತೊಡಗಿ ಕನ್ನಡ ನಾಡು-ನುಡಿ, ನೆಲ-ಜಲ, ಭಾಷೆ-ಸಂಸ್ಕøತಿ, ಪರಂಪರೆಯ ರಕ್ಷಣೆಗಾಗಿ ದುಡಿದವರನ್ನು ಸ್ಮರಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

ಪರಿಷತ್ತಿನ ಗೌರವ ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ, ಪ್ರಮುಖರಾದ ಶಕುಂತಲಾ ಪಾಟೀಲ ಜಾವಳಿ, ಶಿಲ್ಪಾ ಜೋಶಿ, ಶ್ರೀಕಾಂತ ಪಾಟೀಲ ತಿಳಗೂಳ, ರಾಜೇಂದ್ರ ಮಾಡಬೂಳ, ಮಲ್ಲಿನಾಥ ಸಂಗಶೆಟ್ಟಿ, ಶಿವಾನಂದ ಮಠಪತಿ, ಎಂ ಎನ್ ಸುಗಂಧಿ, ಪ್ರಭವ ಪಟ್ಟಣಕರ್, ಸಂತೋಷ ಕುಡಳ್ಳಿ, ನಾಗಪ್ಪ ಎಂ ಸಜ್ಜನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ವಿದ್ಯಾರ್ಥಿ ಸಮೂಹ ಹಾಗೂ ಯುವ ಜನಾಂಗದಲ್ಲಿ ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸುವಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅವಿರತವಾಗಿ ಶ್ರಮಿಸುತ್ತಿದೆ. ಆ ಮೂಲಕ ಸಾಂಸ್ಕøತಿಕ, ಸಾಹಿತ್ಯಕ, ಕಲೆ, ರಂಗದ ಪ್ರತಿಭಾವಂತರಿಗೆ ಪರಿಷತ್ತು ಉತ್ತಮ ವೇದಿಕೆ ಒದಗಿಸುತ್ತಿದೆ.- ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕಸಾಪ ಜಿಲ್ಲಾಧ್ಯಕ್ಷ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here