ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ ಪ್ರತಿಷ್ಠೆ ಎತ್ತಿಹಿಡಿದ ರಾಧಕೃಷ್ಣ ದೊಡ್ಡಮನಿ

0
59

ಕಲಬುರಗಿ: ಇದು ನನ್ನ ಗೆಲವು ಅಲ್ಲ. ಕಾಂಗ್ರೆಸ್ ಪಕ್ಷದ ಗೆಲವಾಗಿದ್ದು, ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಲೋಕಸಭೆ ಚುನಾವಣೆ ಗೆಲವು ಸಾಧಿಸಿ ಕಾಂಗ್ರೆಸ್ ಪಕ್ಷದ ರಾಧಾಕೃಷ್ಣ ದೊಡ್ಡಮನಿ ಅವರು ಮತ ಏಣಿಕೆಯ ನಂತರ ಮಾತನಾಡಿ ತನ್ನ ಮೊದಲ ಅನಿಸಿಕೆ ಹಂಚಿಕೊಂಡರು.

2019ರ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆಯರನ್ನು ಸೋಲಿಸಿ ಭಾರಿ ಜಯಭೇರಿ ಭಾರಿಸಿದ್ದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಅವರಿಗೆ 2024ರ ಚುನಾವಣೆಯಲ್ಲಿ 27205 ಮತಗಳ ಅಂತರದಿಂದ ಸೋಲಿಸುವ ಮೂಲಕ ಅಭೂತಪೂರ್ವ ಜಯ ಸಾಧಿಸಿ ಮಾವನ ಸೋಲಿನ ಸೇಡನ್ನು ತೀರಿಸಿಕೊಂಡರು.

Contact Your\'s Advertisement; 9902492681

ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 652321 ಮತಗಳು ಪಡೆದರೆ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ಡಾ. ಉಮೇಶ್ ಜಾಧವ್ ಅವರು 625116 ಮತಗಳು ಪಡೆಯುವ 27205 ಮತಗಳ ಅಂತರದಿಂದ ಸೋಲನ್ನು ಕಂಡರು.

ಮತ ಎಣಿಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಭಾರಿ ನೇರ ನೇರ ಪೈಪೋಟಿ ಏರ್ಪಟ್ಟಿರುವ ನಡುವೆಯು ಕಾಂಗ್ರೆಸ್ ಅಭ್ಯರ್ಥಿ ದೊಡ್ಡಮನಿಗೆ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಸವರು 50 ಸಾವಿರಕ್ಕೂ ಹೆಚ್ಚು ಲೀಡ್ ಒದಗಿಸುವ ಮೂಲಕ ಕಾಂಗ್ರೆಸ್ ಪಕ್ಷದ ಗೆಲವಿಗೆ ಪ್ರಮುಖ ತೀರುವು ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here