ಭೂ ಮರುಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ” ಕುರಿತು ಉಪನ್ಯಾಸ

0
24

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಬುಧವಾರದಂದು ವಿವಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆ 2024 ಕಾರ್ಯಕ್ರಮದಲ್ಲಿ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕಾಂತ ಆರ್ ಮಿಸೆ ಅವರು “ಭೂ ಮರುಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ” ವಿಷಯದ ಮೇಲೆ ಮುಖ್ಯ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅನಿಲಕುಮಾರ ಬಿಡವೆ, ಕುಲಸಚಿವ ಡಾ. ಎಸ್ ಜಿ ಡೊಳ್ಳೆಗೌಡರ್, ಕುಲಸಚಿವ(ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಹಲವು ದಿನಗಳ ಹಿಂದೆ ನಡೆದ ವಾರ್ಷಿಕ ಕ್ರೀಡಾ ಕೂಟ-2024ರಲ್ಲಿ ವಿಜೇತರಾದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here