ಈಶಾನ್ಯ ಪದವೀಧರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣ: ಕೃಷ್ಣ ಭಾಜಪೇಯಿ

0
70

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2024 ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತ ಎಣಿಕೆಯು ಗುರುವಾರ ಜೂನ್ 6 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕೇಂದ್ರವಾದ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿರುವ ಸಾದ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಅಧ್ಯಾಯನ ಪೀಠ ಮತ್ತು ಸಂಶೋಧನಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ತಿಳಿಸಿದ್ದಾರೆ.

ಬುಧವಾರ ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರೊಂದಿಗೆ ಮತಎಣಿಕೆ ಕೇಂದ್ರಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಈ ಕ್ಷೇತ್ರಕ್ಕೆ ಮತದಾನವು ಈಗಾಗಲೇ ಜೂನ್ 3ರಂದು ಜರುಗಿದ್ದು, ಕಲಬುರಗಿ ವಿಭಾಗದ 7 ಜಿಲ್ಲೆಗಳಲ್ಲಿ ಒಟ್ಟು 195 ಮತಗಟ್ಟೆಗಳಲ್ಲಿ ನಡೆದಿದೆ. ಮತಪೆಟ್ಟಿಗೆಗಳನ್ನು ಮತ ಎಣಿಕೆ ಕೇಂದ್ರ ಕಟ್ಟಡದಲ್ಲಿ ಸ್ತಾಪಿಸಲಾಗಿರುವ ಭದ್ರತಾ ಕೊಠಡಿಯಲ್ಲಿ ಇಡಲಾಗಿದೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 19 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿರುವ ಭದ್ರತಾ ಕೊಠಡಿಯನ್ನು ಜೂನ್ 6 ರಂದು ಬೆಳಿಗ್ಗೆ 8 ಗಂಟೆಗೆ ಚುನಾವಣಾ ವೀಕ್ಷಕರು ಹಾಗೂ ಉಪಸ್ಥಿತ ಅಭ್ಯರ್ಥಿಗಳ ಸಮ್ಮುಖದಲ್ಲಿ ತೆರೆಯಲಾಗುವುದೆಂದು ಅವರು ತಿಳಿಸಿದರು.

Contact Your\'s Advertisement; 9902492681

ಮತ ಎಣಿಕೆಗಾಗಿ ಸಕಲ ಸಿದ್ದತೆಗಳನ್ನು ಕೈಕೊಂಡಿದ್ದು, ಮತ ಎಣಿಕೆ ಚುನಾವಣಾಧಿಕಾರಿಗಳಿಗೆ 01 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಚುನಾವಣಾಧಿಕಾರಿಗಳೊಂದಿಗೆ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುವರು. ಇದಲ್ಲದೇ, ಚುನಾವಣಾ ಮಾರ್ಗಸೂಚಿಯಂತೆ, ಮತ ಎಣಿಕೆಗಾಗಿ 14 ಟೇಬಲ್‍ಗಳಿದ್ದು, ಪ್ರತಿ ಟೇಬಲಿಗೆ ಒಬ್ಬ ಮತ ಎಣಿಕೆ ಅಧಿಕಾರಿ ಹಾಗೂ 2 ಸಹಾಯಕ ಸಿಬ್ಬಂದಿ ಇರುತ್ತಾರೆ. ಪ್ರತಿ ಟೇಬಲ್‍ಗೆ ಅಭ್ಯರ್ಥಿಗಳ ಎಜೆಂಟರ್‍ನ್ನು ನಿಯುಕ್ತಿಗೊಳಿಸಲಾಗಿದೆ.

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ್ದ ಮತ ಏಣಿಕೆ ಕೇಂದ್ರದ ಸುತ್ತಮುತ್ತಲೂ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದ್ದು, 3 ಎಸಿಪಿ, 6 ಪಿಐ, 6 ಪಿಎಸ್‍ಐ, 12 ಇಎಸ್‍ಐ ಹಾಗೂ 87 ಪೆÇಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೇ ಆವರಣದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಬಳಕೆ ನಿಬರ್ಂಧಿಸಲಾಗಿದೆ. ಇದಲ್ಲದೇ ಇಂಕ್ ಪೆನ್, ಬೀಡಿ, ಸಿಗರೇಟ್, ಪಾನ್, ಬೀಡಾ, ಹರಿತ ಆಯುಧಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಸಣಗಿ, ಕಲಬುರಗಿ ವಿಭಾಗದ ಸಹಾಯಕ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ, ಕಲಬುರಗಿ ಸಹಾಯಕ ಆಯುಕ್ತ ರೂಪಿಂದರ್ ಕೌರ್, ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ (ಆಡಳಿತ) ಮಾಧವ ಗಿತ್ತೆ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here