ವಿವಾದಿತ ಹಮಾರೆ ಬಾರಾಹ್ ಸಿನಿಮಾ ರಾಜ್ಯದಲ್ಲಿ ನಿಷೇಧ:  ರಾಜ್ಯ ಸರಕಾರ ಆದೇಶ

0
199

ಕಲಬುರಗಿ: ನಾಳೆ ಬಿಡುಗಡೆಯಾಗಲಿದ್ದ “ಹಮಾರೆ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಲಬುರಗಿ ಜಿಲ್ಲೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಮುಖಂಡರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ‌ ಮುಂದೆ ಸಿನಿಮಾದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಈ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.

Contact Your\'s Advertisement; 9902492681

ರಾಜ್ಯ ಸರಕಾರ ರಾಜ್ಯದ ವಿವಿಧ ಜಿಲ್ಲೆ / ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಜೀ ಸಿನಿಮಾ ವಾಹಿನಿಯು ಇತ್ತೀಚಿಗೆ “ಹಮಾರೆ ಬಾರಾಹ್” ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಒಂದು ಷಡ್ಯಂತ್ರವಾಗಿದೆ ಎಂಬ ಆರೋಪಗಳು ಮಾಡಿದರು.

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್ 07, 2024 ರಂದು ದೇಶಾದ್ಯಂತ “ಹಮಾರೆ ಬಾರಾಹ್” ಚಲನಚಿತ್ರವನ್ನು ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದಲ್ಲಿ ಶಾಂತಿಗೆ ಭಂಗವುಂಟು ಮಾಡುವ ಹಾಗೂ ಜಾತಿ ಜಾತಿಗಳ ಮಧ್ಯೆ ದ್ವೇಷವುಂಟು ಮಾಡುವ, ಒಂದು ಧರ್ಮದ ಪದ್ಧತಿಗಳನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿ ಧರ್ಮಗಳ ಮಧ್ಯೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಅಥವಾ ಸೌಹಾರ್ದತೆ ಹದಗೆಡಲು ಕಾರಣವಾಗುವ ಸಾಧ್ಯತೆಯ ಬಗ್ಗೆ ಹಾಗೂ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತೆ ಬಿಂಬಿತವಾಗಿರುವ ಸನ್ನಿವೇಶಗಳು ಕಂಕಂಡುಬಂದಿರುತ್ತವೆ.

ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(1) ಮತ್ತು 15(5) ರಡಿಯಲ್ಲಿ “ಹಮಾರೆ ಬಾರಾಹ್” ಎಂಬ ಟ್ರೈಲರ್ ಹಾಗೂ ಸಿನಿಮಾವನ್ನು ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ/ ಸಾಮಾಜಿಕ ಜಾಲತಾಣ/ ಸಿನಿಮಾ ಮಂದಿರಗಳು/ ಖಾಸಗಿ ಟಿವಿ ಚಾಲನ್‌ ಗಳು/ ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here