ಕಲಬುರಗಿ: ರಾಜ್ಯ ಸರ್ಕಾರ ದಿಢೀರನೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡುವ ಮೂಲಕ ರಾಜ್ಯದ ಜನರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಕಲಬುರಗಿಯ ಎಸ್‍ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ಕೈಗೊಂಡು ಪ್ರತಿಭಟಿಸಿದರು.
ಈ ವೇಳೆ ಮಾತನಾಡಿ ವಿರೋಧ ಪಕ್ಷದ ನಾಯಕ ಆರ್ ಆಶೋಕ ರಾಜ್ಯದ ಅಭಿವೃದ್ಧಿಗೆ ಇರುವ ಎಲ್ಲಾ ಹಣವನ್ನು ಫ್ರೀ ಯೋಜನೆಗಳಿಗೆ ಬಳಸಲಾಗುತ್ತಿದೆ. ಕಾಂಗ್ರೆಸ್ ಶಾಸಕರೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ದುರಿದರು.
ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಮುಖಂಡರು ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಬಿ.ಜಿ.ಪಾಟೀಲ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಚಂದು ಪಾಟೀಲ್, ಮೇಯರ್ ವಿಶಾಲ ದರ್ಗಿ, ಶೋಭಾ ಬಾಣಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.