ಪೆಟ್ರೋಲ್-ಡೀಸೆಲ್‍ನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

0
26

ಶಹಾಬಾದ: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್‍ನ ದರ ಏರಿಕೆ ವಿರೋಧಿಸಿ ಗುರುವಾರ ಬಿಜೆಪಿ ವತಿಯಿಂದ ನಗರದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ -2 ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಮಂಡಲ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಮಾತನಾಡಿ, ಕಳೆದ ಶನಿವಾರ ರಾಜ್ಯಸರ್ಕಾರ ಪೆಟ್ರೋಲ್-ಡೀಸಲ್ ಮೇಲಿನ ಮಾರಾಟ ತೆರಿಗೆಯನ್ನು ಏರಿಸಿತ್ತು. ಇದರಿಂದ ಪೆಟ್ರೋಲ್ ದರ ಲೀ. 3 ರೂ. ಮತ್ತು ಡೀಸಲ್ ದರ 3.50 ಪೈ. ಹೆಚ್ಚಳವಾಗಿತ್ತು. ಈ ದರ ಏರಿಕೆಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿ, ದರ ಏರಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.

Contact Your\'s Advertisement; 9902492681

ಆದರೆ,ಮುಖ್ಯಮಂತ್ರಿ ಸಿದ್ದರಾಮಯ್ಯರವರು ದರ ಏರಿಕೆಯನ್ನು ಸಮರ್ಥಿಸಿಕೊಂಡು ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್-ಡೀಸಲ್ ದರ ಕಡಿಮೆ ಇದೆ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ, ಪೆಟ್ರೋಲ್-ಡೀಸಲ್ ಬೆಲೆ ಏರಿಕೆಯಿಂದ ಜನಸಮಾನ್ಯರಿಗೆ ತೊಂದರೆಯಾಗುತ್ತದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಇದರಿಂದ ಆಗಲಿದೆ. ಕೂಡಲೇ ದರ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಭೀಮರಾವ ಸಾಳುಂಕೆ, ಅರುಣ ಪಟ್ಟಣಕರ, ಕನಕಪ್ಪ ದಂಡಗುಲಕರ ಮಾತನಾಡಿ,ಪೆಟ್ರೋಲ್-ಡೀಸಲ್ ಬೆಲೆ ಏರಿಕೆ ಜನಸಾಮಾನ್ಯರಿಗೆ ಹೊರೆಯಾಗುತ್ತದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯರವರು ದರ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಅವರು, ದರ ಏರಿಕೆ ವಾಪಸ್ ಆಗುವವರೆಗೂ ಬಿಜೆಪಿಯ ಹೋರಾಟ ನಿಲ್ಲದು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬೇರೆ ರಾಜ್ಯಗಳಲ್ಲಿ ದರ ಹೆಚ್ಚಿದೆ ಎಂಬ ಉಡಾಫೆಯ ಮಾತುಗಳನ್ನು ಬಿಟ್ಟು ಏರಿಸಿರುವ ಪೆಟ್ರೋಲ್-ಡೀಸಲ್ ದರವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ದಿನೇಶ ಗೌಳಿ, ಸಿದ್ರಾಮ ಕುಸಾಳೆ, ಸದಾನಂದ ಕುಂಬಾರ, ಶರಣು ವಸ್ತ್ರದ, ನಾರಾಯಣ ಕಂದಕೂರ, ಶಶಿಕಲಾ ಸಜ್ಜನ, ನಂದಾ ಗುಡೂರ, ಪದ್ಮಾ ಕಟಕೆ, ನೀಲಗಂಗಮ್ಮ ಘಂಟ್ಲಿ, ಸನ್ನಿದಿ ಕುಲಕರ್ಣಿ, ಶಿವಕುಮಾರ ಇಂಗಿನಶೆಟ್ಟಿ, ಅನೀಲಕುಮಾರ ಬೊರಗಾಂವಕರ ಹಾಗೂ ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಪ್ರಮುಖರು, ಮೊರ್ಚಾಗಳ, ಪ್ರಕೋಷ್ಟಗಳ ಮತ್ತು ಬೂತಿನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here