ಮಳೆಗಾಲದಲ್ಲಿ ಸೊಳ್ಳೆಗಳಿಂದ ರಕ್ಷಣೆ ಪಡೆಯಿರಿ: ಡಾ.ಅಬ್ದುಲ್ ರಹೀಮ್

0
97

ಶಹಾಬಾದ: ಮಳೆಗಾಲ ಪ್ರಾರಂಭವಾಗಿದ್ದು, ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದೆ. ಸೊಳ್ಳೆಗಳಿಂದಾಗುವ ಮಾರಕ ರೋಗಗಳಿಂದ ರಕ್ಷಣೆ ಪಡೆಯಲು ಸೂಕ್ತ ಸಾರ್ವಜನಿಕರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್ ತಿಳಿಸಿದ್ದಾರೆ.

ನೈರುತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಈ ಸಂದರ್ಭದಲ್ಲಿ ಜನರು ಆರೋಗ್ಯದ ಕಡೆಗೂ ಗಮನಹರಿಸಬೇಕಿದೆ.ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು ಹಾಗೂ ಎಲ್ಲೆಂದರಲ್ಲಿ ಕಸದ ರಾಶಿ ಹಾಕುವುದರಿಂದ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳಲಿವೆ.

Contact Your\'s Advertisement; 9902492681

ಕೆಲ ಸಾಂಕ್ರಾಮಿಕ ರೋಗಗಳನ್ನು ಸುಲಭವಾಗಿ ನಿಯಂತ್ರಿಸಬಹುದು. ಆದರೆ ಕೆಲ ರೋಗಗಳು ಜೀವಕ್ಕೆ ಸಂಚಕಾರ ತರುತ್ತವೆ. ಮಲೇರಿಯಾ, ಡೆಂಗಿ ಮತ್ತು ಚಿಕೂನ್‍ಗುನ್ಯ ಮಾರಕ ರೋಗಗಳಾಗಿವೆ. ಮುನ್ನೆಚ್ಚರಿಕೆಯ ಕ್ರಮಗಳಿಂದ ಈ ಕಾಯಿಲೆಗಳನ್ನು ತಡೆಗಟ್ಟಬಹುದು. ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳುವುದು ಹೆಚ್ಚು ಪರಿಣಾಮಕಾರಿ ಎಂದು ವೈದ್ಯರು ಹೇಳುತ್ತಾರೆ.

‘ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಕಿಟಕಿ ಮತ್ತು ಬಾಗಿಲುಗಳಿಗೆ ಮೆಶ್ ಹಾಕಬೇಕು. ಸೊಳ್ಳೆ ನಿವಾರಕ ಔಷಧಗಳನ್ನು ಬಳಸಬೇಕು. ತೀವ್ರತರವಾದ ದೇಹದ ನೋವು, ಅಧಿಕ ಉಷ್ಣತೆ ಇದ್ದರೆ ಅದು ಡೆಂಗಿ ಅಥವಾ ಚಿಕೂನ್‍ಗುನ್ಯದ ಲಕ್ಷಣವಾಗಿರುತ್ತದೆ. ಮೂರು ದಿನಗಳ ನಂತರವೂ ಜ್ವರ ಕಡಿಮೆಯಾಗದಿದ್ದರೆ, ವೈದ್ಯರನ್ನು ಭೇಟಿಯಾಗಬೇಕು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here