ಆಳಂದ; ಕಲ್ಯಾಣ ಕರ್ನಾಟಕ ಭಾಗದ ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತನ ಸದಸ್ಯ ಶಶೀಲ ನಮೋಶಿ ಅವರಿಗೆ ವಿಧಾನ ಪರಿಷತ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುವುದರ ಮೂಲಕ ಪಕ್ಷದ ವರಿಷ್ಠರು ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕು ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಪಕ್ಷದ ಬಿಜೆಪಿ ರಾಜ್ಯ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಹಾಗೂ ಪಕ್ಷದ ವರಿಷ್ಠರಿಗೆ ಪತ್ರ ಬರೆದಿರುವ ಅವರು, ನಮೋಶಿ ಅವರು ಜಿಲ್ಲೆಯಲ್ಲಿ ಪಕ್ಷ ಕಟ್ಟಿ ಬೆಳೆಸಿದ ನಾಯಕರಲ್ಲಿ ಒಬ್ಬರಾಗಿದ್ದಾರೆ ಅಲ್ಲದೇ ಈ ಹಿಂದೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಗಳಾಗಿ, ರಾಜ್ಯ ವಕ್ತಾರರಾಗಿ ಪಕ್ಷವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ವಿಧಾನ ಪರಿಷತ್ತಗೆ ನಾಲ್ಕು ಅವಧಿಗೆ ಸದಸ್ಯರಾಗಿ ಆಯ್ಕೆಯಾಗುವುದರ ಮೂಲಕ ಶಿಕ್ಷಕರ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಗುರುತಿಸಿ ಪರಿಹಾರ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಸಂಪರ್ಕ ಹೊಂದಿದ್ದಾರೆ ಅಲ್ಲದೇ ಭಾರತೀಯ ಜನತಾ ಪಕ್ಷದ ಅನೇಕ ಹಿರಿಯರ ಜೊತೆ ಉತ್ತಮ ಒಡನಾಟವಿದೆ ಈ ನಿಟ್ಟಿನಲ್ಲಿ ಅವರನ್ನು ವಿಪಕ್ಷ ನಾಯಕರನ್ನಾಗಿ ಮಾಡಿದರೇ ಪಕ್ಷಕ್ಕೆ ಆನೆಬಲ ಬರಲಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪಕ್ಷದಲ್ಲಿನ ಅವರ ಹಿರಿತನ, ಸೇವೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಅವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿ ಈ ಭಾಗಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.