- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಕಾಂಗ್ರೆಸ್ ಮುಖಂಡ ವಸೀಂ ಖಾನ್ ಅವರು ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯ ಕರ್ತರಾಗಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾದಂತೆ ಒಗ್ಗೂಡಿಸಿ ಸಂಘಟಿಸುವುದರಲ್ಲಿ ಇವರ ಶ್ರಮ ಸಾಕಷ್ಟಿದೆ. ವಿವಿಧ ಹಂತದ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಆದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದ್ದಾರೆ.