ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘಿಸಿದ 55 ಜನರಿಗೆ 22.27 ಲಕ್ಷ ರೂ. ದಂಡ

0
62

ಕಲಬುರಗಿ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರದ ಸಭೆ

ಕಲಬುರಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ-2007 ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲೆಯ 55 ಕ್ಲಿನಿಕ್ ಮತ್ತು ವೈದ್ಯರಿಗೆ ಒಟ್ಟು 22.27 ಲಕ್ಷ ರೂ. ದಂಡ ವಿಧಿಸಲು ಮಂಗಳವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಕೆ.ಪಿ.ಎಂ.ಇ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 42 ಜನರಿಗೆ ತಲಾ 50 ಸಾವಿರ ರೂ., 5 ಜನರಿಗೆ ತಲಾ 20 ಸಾವಿರ ರೂ., 5 ಜನರಿಗೆ ತಲಾ 5 ಸಾವಿರ ರೂ., ಇಬ್ಬರಿಗೆ ತಲಾ 1ಸಾವಿರ ರೂ. ದಂಡ ವಿಧಿಸಿ ಕೂಡಲೆ ದಂಡ ಕಟ್ಟಲು ಆದೇಶಿಸಿಲಾಗಿದೆ. ಉಳಿದಂತೆ 6 ಜನ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಮೊಕದೊಮ್ಮೆ ಹೂಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಅವರು ಎಚ್ಚರಿಕೆ ನೀಡಿದ್ದಾರೆ.

Contact Your\'s Advertisement; 9902492681

ಕಳೆದ ಡಿಸೆಂಬರ್ ದಿಂದ ಜೂನ್ ಮಾಹೆ ವರೆಗೆ ಸಹಾಯಕ ಆಯುಕ್ತರ ನೇತೃತ್ವದ ತಪಾಸಣಾ ತಂಡ ನಿಯಮಿತ ದಾಳಿ ನಡೆಸಿ ಒಟ್ಟು 61 ಕ್ಲಿನಿಕ್ ಮತ್ತು ವೈದ್ಯರ ಮೇಲೆ ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಇಲಾಖಾ ಎಫ್.ಐ.ಆರ್. ದಾಖಲಿಸಿ ಡಿ.ಸಿ. ಅಧ್ಯಕ್ಷತೆಯ ಕುಂದುಕೊರತೆ ಪ್ರಾಧಿಕಾರದ‌ ಮುಂದೆ ಹಾಜರಾಗುವಂತೆ‌ ನೋಟಿಸ್ ನೀಡಲಾಗಿತ್ತು. ಅದರಂತೆ ಮಂಗಳವಾರ ಸಭೆಗೆ ಅಗಮಿಸಿದ ವೈದ್ಯರ ಅಹವಾಲು ಆಲಿಸಿ ಡಿ.ಸಿ. ದಂಡ‌ ವಿಧಿಸಿದ್ದಾರೆ.

ಸಭೆಯಲ್ಲಿ ಡಿ.ಎಚ್.ಓ. ಡಾ.ರತಿಕಾಂತ ಸ್ವಾಮಿ, ಆಳಂದ ತಹಶೀಲ್ದಾರ ಯಲ್ಲಪ್ಪ ಸುಬೇದಾರ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ಗಿರಿಜಾ ನಿಗ್ಗುಡಗಿ ಸೇರಿದಂತೆ ಇನ್ನಿತರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here