ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

0
19

 

ಕಲಬುರಗಿ : “ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ ರಾಜ್ಯದಲ್ಲಿ ಸದ್ದುಮಾಡುತ್ತಿವೆ. ಸರಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ” ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯಾ ಕಾರ್ಯದರ್ಶಿ ಮುಬೀನ ಅಹ್ಮದ್ ಸರಕಾರವನ್ನು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಮಾಧ್ಯಮಗಳ ವರದಿಯ ಪ್ರಕಾರ ಈಗಾಗಲೇ ಡೆಂಗಿ ಪೀಡಿತರ ಸಂಖ್ಯೆ ೭೧೬೪ ದಾಖಲಾಗಿವೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟಲು ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕಾಗಿದೆ. ಹಾಗೆಯೇ ಝಿಕಾ ಸೋಂಕು, ಚಿಕನ್‌ ಗುನ್ಯಾ ಮುಂತಾದ ರೋಗಗಳು ಹರಡುವ ಸೂಚನೆಗಳು ಕಂಡುಬರುತ್ತವೆ.

ಈ ರೋಗಗಳು ವ್ಯಾಪಕವಾಗುವುದಕ್ಕೆ ಮೊದಲೇ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರೆಯಲು ಅವಕಾಶ ಮಾಡಿಕೊಡಬೇಕಾಗಿದೆ.

ಅದರಲ್ಲೂ ಝಿಕಾ ವೈರಾಣು ಸೋಂಕಿಗೆ ನಿರ್ಧಿಷ್ಟ ಚಿಕಿತ್ಸೆ ಲಭ್ಯವಿರದ ಕಾರಣ ಸರಕಾರ ಈ ರೋಗ ನಿಯಂತ್ರಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here