ಕಲಬುರಗಿ: ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಕಲಬುರಗಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಉದ್ಘಾಟಿಸಿದರು.
ಶಾಸಕ ಅಲ್ಲಮಪ್ರಭು ಪಾಟೀಲ, ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ.ಆಕಾಶ್ ಎಸ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಎಸ್.ಅಷ್ಟಗಿ, ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ ಸೇರಿದಂತೆ ಮತ್ತಿತರರು ಇದ್ದರು.