ಡೆಂಗ್ಯೂ ಮತ್ತು ಚಿಕನ್ ಗುನ್ಯಾ ವ್ಯಾಪಕ ಹಿನ್ನೆಲೆ: ಕಲಬುರಗಿ DHO ಕಚೇರಿಯಲ್ಲಿ ಸಹಾಯವಾಣಿ ಸ್ಥಾಪನೆ

0
50

ಕಲಬುರಗಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಡೆಂಗ್ಯೂ ಹಾಗೂ ಚಿಕೂನಗುನ್ಯಾ ಜ್ವರ ಹರಡುತ್ತಿದ್ದು, ಇದರ ನಿಯಂತ್ರಣ ಹಾಗೂ ಮುಂಜಾಗೃತ ಕ್ರಮಗಳನ್ನು ಸಾರ್ವಜನಿಕರಿಗೆ ತಿಳಿಸುವ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಾಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಡಿ.ಎಚ್.ಓ ಡಾ.ರತಿಕಾಂತ ಎಸ್. ಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಹಾಯ ಸಂಖ್ಯೆ 6363152295 ಗೆ ಸಾರ್ವಜನಿಕರು ಕರೆ ಮಾಡಿ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಜ್ವರದ ಬಗ್ಗೆ ಸಲಹೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದಿದ್ದಾರೆ.

Contact Your\'s Advertisement; 9902492681

ಡೆಂಗ್ಯೂ ಹಾಗೂ ಚಿಕನಗುನ್ಯಾ ರೋಗ ಹತೋಟಿಗೆ ತರಬೇಕಾದರೆ ಸೊಳ್ಳೆಗಳ ನಿಯಂತ್ರಣವೇ ಮದ್ದಾಗಿದೆ.
ಸಿಮೆಂಟ ತೊಟ್ಟಿ, ಕಲ್ಲು ಚಿಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್, ಬ್ಯಾರಲ್, ಮಣ್ಣಿನ ಮಡಿಕೆ, ಉಪಯೋಗಿಸದೇ ಇರುವ ಒರಳು ಕಲ್ಲು, ಬಿಸಾಡಿದ ಖಾಲಿ ಟೆಂಗಿನ ಚಿಪ್ಪು, ಖಾಲಿ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಶೇಖರಣೆಯಾಗುವ ನೀರಿನಲ್ಲಿ ಲಾರ್ವಾ ಉತ್ಪತ್ತಿಯಾಗುವುದರಿಂದ ಇಲ್ಲಿ ಈಡೀಸ್ ಸೊಳೆಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ ಇಲ್ಲಿ ಮುಖ್ಯವಾಗಿ ನೀರು ನಿಲ್ಲದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ ಎಂದಿದ್ದಾರೆ.

ಇನ್ನು ನೀರಿನ ತೊಟ್ಟಿ, ಡ್ರಮ್, ಬ್ಯಾರೆಲ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಬ್ರಷ್ ಅಥವಾ ತೆಂಗಿನ ಗುಂಜಿನಿಂದ ತಿಕ್ಕಿ ತೊಳೆದು ಒಣಗಿಸಿರಬೇಕು. ನೀರು ಖಾಲಿ ಮಾಡಲು ಸಾಧ್ಯವಿರದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾಗಿ ಮುಚ್ಚಳದಿಂದ ಮುಚ್ಚುವುದು ಅವಶ್ಯಕವಾಗಿದೆ ಎಂದಿದ್ದಾರೆ.

ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರ್, ಎಳೆ ನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು ಮತ್ತು ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ಹಾಗೂ ನೀರು ಸರಾಗವಾಗಿ ಸಾಗುವಂತೆ ನೋಡಿಕೊಳ್ಳಬೇಕು. ಘನತ್ಯಾಜ್ಯ ವಸ್ತುಗಳು ಎಲ್ಲೆಂದರಲ್ಲಿ ಬಿಸಾಡದೆ ಸೂಕ್ತ ವಿಲೇವಾರಿ ಮಾಡಬೇಕು
ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here