ಕಲಬುರಗಿ: ಮಹಾಗಾಂವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಶಿಕ್ಷಕ ಚಂದ್ರಕಾಂತ ಬಿರಾದಾರ ಅವರಿಗೆ ನಗರದ ಅಣ್ಣಾರಾವ ಬೆಣ್ಣೂರ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ದಂಪತಿಗೆ ಸತ್ಕರಿಸಿ, ಅಭಿನಂದಿಸಲಾಯಿತು.
ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ಶಿಕ್ಷಣ ಸಂಯೋಜನಾಧಿಕಾರಿಗಳಾದ ಲಕ್ಷ್ಮೀಕಾಂತ ಮೇತ್ರೆ, ಅರ್ಜುನ ಹತ್ತಿ, ಸಿಆರ್ಸಿ ರಾಜಕುಮಾರ ಸಜ್ಜಿ, ಶಿಕ್ಷಕರಾದ ರಾಜಕುಮಾರ ಬಟಗೇರಿ ಸೇರಿದಂತೆ ಇನ್ನಿತರರಿದ್ದರು.