ಕಲಬುರಗಿ ನಗರದ ಕುಡಿಯುವ ನೀರಿನ ಸರಬರಾಜು ಸಮಸ್ಯೆ ಪರಿಹರಿಸಲು ವೆಲ್ಫೇರ್ ಪಾರ್ಟಿ ಆಗ್ರಹ

0
55

ಕಲಬುರಗಿ: ಇಲ್ಲಿನ ನಗರದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಅವ್ಯವಸ್ಥೆಯಿದ್ದು ಕೂಡಲೇ ಸಮಸ್ಯೆಯನ್ನು ಪರಿಹರಿಸಲು ಸರಕಾರ ಮುಂದಾಗಬೇಕಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಕಾರ್ಯದರ್ಶಿ ಮುಬೀನ್ ಆಗ್ರಹಿಸಿದ್ದಾರೆ.

ಅವರು ಮಾತನಾಡುತ್ತಾ “ವಾರದಲ್ಲಿ ಒಂದೆರಡು ಬಾರಿ ಮಾತ್ರ ಕುಡಿಯುವ ಮಾತ್ರ ಸರಬರಾಜು ಮಾಡುತ್ತದೆ. ಆದರೆ ಆ ನೀರು ಕಲುಶಿತವಾಗಿದ್ದು ಜನರು ಬಳಸಲು ಯೋಗ್ಯವಾಗಿಲ್ಲ. ನಂತರ. ಸಾರ್ವಜನಿಕ ರು ದಿನಂಪ್ರತಿ ಐವತ್ತೋ ಅರುವತ್ತೋ ರೂಪಾಯಿ ನೀಡಿ ಖರೀದಿಸುತ್ತಿದ್ದಾರೆ. ಇದು ಜನಸಾಮಾನ್ಯರಿಗೆ ಭಾರವಾಗುತ್ತದೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದಾಗ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ರವರು ಸಭೆ ನಡೆಸಿ ಉನ್ನತಾಧಿಕಾರಿಗಳನ್ನು ಕರೆದು ತ್ವರಿತವಾಗಿ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಹೇಳಿದ್ದರು. ಅದು ಅನುಷ್ಠಾನವಾಗುತ್ತಿಲ್ಲ‍ ಎಲ್ ಆಂಡ್ ಟಿ . ಕಂಪನಿಇದರ ಗುತ್ತಿಗೆ ವಹಿಸಿಕೊಂಡಿದ್ದು, ಕೆಲಸ ಮಾತ್ರ ತೀರಾ ನಿಧಾನವಾಗಿ ಆಮೆಗತಿಯಲ್ಲಿ ಸಾಗುತ್ತಿದೆ. ಪ್ರತೀ ದಿನ ನೀರು ಸರಬರಾಜು ಮಾಡಿ ಈ ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಮುಂದಾಗಬೇಕೆಂದು ವೆಲ್ಫೇರ್ ಪಾರ್ಟಿ ಆಗ್ರಹಿಸುತ್ತದೆ ಎಂದು ಅವರು ಹೇಳಿದರು.

Contact Your\'s Advertisement; 9902492681

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎ.ಕದೀರ್ ಉಪಾಧ್ಯಕ್ಷ ಸಿದ್ದಣ್ಣ ಚಕರಾ, ರಾಜ್ಯ ಕಾರ್ಯದರ್ಶಿ ಮುಬೀನ್ ಹಾಗೂ ಜಿಲ್ಲಾ ಕಾರ್ಯದರ್ಶಿ ಮುನೀರ್ ಹಾಶ್ಮಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here