ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿ ರಂಗ ಸಂಗಮ ಕಲಾ ವೇದಿಕೆ ವತಿಯಿಂದ ಎಸ್.ಬಿ.ಜಂಗಮಶೆಟ್ಟಿ ಹಾಗೂ ಸುಭದ್ರಾದೇವಿ ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಬಳ್ಳಾರಿಯ ಪುರುಷೋತ್ತಮ ಹಂದ್ಯಾಳ್ ಅವರಿಗೆ ಎಸ್.ಬಿ.ಜಂಗಮಶೆಟ್ಟಿರಂಗ ಪ್ರಶಸ್ತಿ ಮತ್ತು ಶಿಗ್ಗಾಂವ್‍ನ ರಾಧಿಕಾ ವಿ.ಬೇವಿನಕಟ್ಟಿಅವರಿಗೆ ಸುಭದ್ರಾದೇವಿ ಜಂಗಶೆಟ್ಟಿ ರಂಗ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು. ಸೇಡಂನ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಅಧ್ಯಕ್ಷರಾದ ಸದಾಶಿವ ಸ್ವಾಮಿಗಳು ಸಮಾರಂಭದ ಸಾನಿಧ್ಯವಹಿಸಿದ್ದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಶರಣಪ್ಪ ವಿ.ಹಲಸೆ ಅಧ್ಯಕ್ಷತೆ ವಹಿಸಿದ್ದರು. ಎಸ್.ಬಿ.ಜಂಗಮಶೆಟ್ಟಿ ಹಾಗೂ ಸುಭದ್ರಾದೇವಿಜಂಗಮಶೆಟ್ಟಿ ಅವರ ಕುರಿತು ಚಿಂಚೋಳಿ ಹಿರಿಯ ಶ್ರೇಣಿ ನ್ಯಾಯಾಲಯದ ಆದೇಶ ಜಾರಿಕಾರ ಮಹಾದೇವ ಎಂ. ಹಂಗರಗಿ ಅವರು ಮಾತನಾಡಿದರು.
ಪ್ರಶಸ್ತಿ ಪುರಸ್ಕøತರಾದ ಪುರುಷೋತ್ತಮ ಹಂದ್ಯಾಳ್ ಮತ್ತು ರಾಧಿಕಾ ವಿ.ಬೇವಿನಕಟ್ಟಿ ಅವರ ಕುರಿತು ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಮಾತನಾಡಿದರು. ರಂಗ ಸಂಗಮ ಕಲಾವೇದಿಕೆಯ ಅಧ್ಯಕ್ಷೆ ಶಿವಗೀತಾ ಬಸವಪ್ರಭು, ಪ್ರಧಾನ ಕಾರ್ಯದರ್ಶಿ ಡಾ.ಸುಜಾತಾ ಜಂಗಮಶೆಟ್ಟಿ, ಬಿ.ಹೆಚ್.ನಿರಗುಡಿ ಉಪಸ್ಥಿತರಿದ್ದರು.
ಶ್ರೀಧರ್ ಹೊಸಮನಿ ಹಾಗೂ ಸಂಗಡಿಗರಿಂದ ಗೀತ ಗಾಯನ ನಡೆಯಿತು. ಶಿವಾನಂದ ಅಣಜಗಿ ಕಾರ್ಯಕ್ರಮ ನಿರೂಪಿಸಿದರು.