ಕಲಬುರಗಿ: ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಲು ಅನುಮೊದನೆ ನೀಡಿದ್ದಕ್ಕಾಗಿ ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸಾವಿತ್ರಿ ಎಸ್. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಜು.7ರಿಂದ ಕಾಲ್ಪನಿಕವಾಗಿ ವೇತನ ನಿಗದಿ ಹಾಗೂ ಆ.1ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸ್ಸು ಮಾಡಿದ ಶೇ.27.5 ರಷ್ಟು ವೇತನ ನಿಗದಿಗೆ ಸಚಿವ ಸಂಪುಟ ಸಭೆಯ ಲ್ಲಿ ಅನುಮೊದನೆ ನೀಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರಿಗೆ ಸಚಿವ ಸಂಪುಟದ ಸಚಿವರುಗಳಿಗೆ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.