ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರಥಮ ಮತ್ತು ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಿಗೋಸ್ಕರ ವಿಶೇಷಸ್ಪೂರ್ತಿದಾಯಕ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಲಾಗಿತ್ತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯದ ಉಪ-ಪ್ರಾಚಾರ್ಯರು ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ. ಉಮಾ ರೇವೂರ ಅವರು ಆಗಮಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.
ಶ್ರೀಮತಿ. ಉಮಾ ರೇವೂರ ಅವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಉದ್ಯೋಗ ಮಾರುಕಟ್ಟಯಲ್ಲಿ ಕಾಮರ್ಸ್ ಬಹುಬೇಡಿಕೆಯ ವಿಷಯವಾಗಿದೆ, ನೀವು ಪಿಯುಸಿಯಲ್ಲಿ ಕಾಮರ್ಸ್ ಚೆನ್ನಾಗಿ ಓದಿದರೆ ಮುಂದೆ ಹಲವಾರು ವೃತ್ತಿಪರ ಕೋಸ್ರ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಾಣಿಜ್ಯ ಕ್ಷೇತ್ರದಲ್ಲಿ ಅಂತಹ ಕೆಲವು ಕೋಸ್ರ್ಗಳಿವೆ, ಅದನ್ನು ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿಯು ವೃತ್ತಿಜೀವನದ ದೃಷ್ಟಿಯಿಂದ ಸಾಕಷ್ಟು ಹಣ ಮತ್ತು ಪ್ರತಿಷ್ಠೆಯನ್ನು ಗಳಿಸಬಹುದು. ಈ ಕೋಸ್ರ್ಗಳನ್ನು ಮಾಡಿದ ನಂತರ, ಉದ್ಯೋಗಕ್ಕಾಗಿ ವಿದೇಶದಲ್ಲಿ ನೆಲೆಸುವ ಅವಕಾಶವನ್ನೂ ಕೂಡ ಪಡೆಯಬಹುದು ಎಂದು ಸ್ಪೂರ್ತಿದಾಯಕ ವಿಶೇಷ ಉಪನ್ಯಾಸವನ್ನು ನೀಡಿದರು.
ಇದೆ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಮೋಹನರಾಜ ಪತ್ತಾರ ಅವರು ಮಾತನಾಡುತ್ತ ಮೇಡಮ ಅವರು ಹೇಳಿರುವ ಹಾಗೆ ವಾಣಿಜ್ಯ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ಮತ್ತು ದ್ವಿತೀಯ ಪಿಯುಸಿಯ ನಂತರ ಆಯ್ಕೆ ಮಾಡಲು ಲಭ್ಯವಿರುವ ವಿವಿಧ ಕೋರ್ಸ್‍ಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರಬೇಕು. ವಾಣಿಜ್ಯ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಆಯ್ಕೆಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಮುಂದೆ ತಮ್ಮ ವೃತ್ತಿ ಜೀವನವನ್ನು ಆಯ್ಕೆ ಮಾಡಿಕೊಳ್ಳಲು ನಿಮಗೆ ತುಂಬಾ ಸಹಾಯವಾಗುತ್ತದೆ. ನೀವೆಲ್ಲಾ ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡಿದರೆ ಖಂಡಿತ ಮುಂದೆ ಒಳ್ಳೆ ಹುದ್ದೆ ಸೇರಿಕೊಳ್ಳವುದರಲ್ಲಿ ಯಾವುದೇ ರೀತಿಯಾದ ಸಂಶಯವಿಲ್ಲ ಎಂದು ನುಡಿದರು.
ವಾಣಿಜ್ಯ ವಿಭಾಗದ ಸಂಯೋಜಕರಾದ ಶ್ರೀಮತಿ. ರಶ್ಮಿ ಸ್ವಾಮಿ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಲ್ಲರನ್ನು ಸ್ವಾಗತಿಸಿದರು. ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಕುಮಾರಿ ಫಾತೀಮಾ ಶಾನಂ ಉಪನ್ಯಾಸದಿಂದ ಪ್ರೇರೆಪಿತಳಾಗಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿನಿಯಾದÀ ಕುಮಾರಿ. ಬಸಮ್ಮ ಎಲ್ಲರನ್ನು ವಂದಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದÀ ಡಾ. ಕಾಶೀಬಾಯಿ, ಶ್ರೀಮತಿ ಸಂತೋಷಿ ಕೆ, ಶ್ರೀಮತಿ ಪ್ರೀಯಾ ಎನ್, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು ಎಂದು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು ಹಾಗೂ ಪತ್ರಿಕಾ ಮಾಧ್ಯಮದ ಸಂಯೋಜಕರಾದ ಬಸವರಾಜ ಗೋಣಿ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.