ಕಲಬುರಗಿ; ಇಲ್ಲಿನ ಕೃಷಿ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಂದ ಡೆಂಗ್ಯೂ ಮತ್ತು ಮಲೇರಿಯಾ ಜಾಗೃತಿ ಜಾಥಾವನ್ನು ಡಫರಾಬಾದಿನ ಕೊಳಗೇರಿ ಪ್ರದೇಶಗಳಲ್ಲಿ ನಡೆಯಿತು.
ಜಾಥಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಭಿತ್ತಿ ಪತ್ರ ಹಿಡಿದು ಡೆಂಗ್ಯೂ ಕುರಿತು ಜಾಗೃತಿ ಸಂದೇಶವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ರಾಜಶೇಖರ ಟಿ. ಬಸನಾಯಕ, ಕಾರ್ಯಕ್ರಮ ಅಧಿಕಾರಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರು ಮಾತನಾಡಿ, ಡೆಂಗ್ಯೂ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೊಳ್ಳೆಗಳು ನೀರು ಶೇಖರಿಸುವ ತಾಣಗಳಾದ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ, ತೆಂಗಿನ ಚಿಪ್ಪು, ಒಡೆದ ಬಾಟಲಿ ಹಾಗೂ ಟೈರ್ ಮುಂತಾದವುಗಳಲ್ಲಿ ಸಂತಾನ ವೃದ್ಧಿಸಿಕೊಳ್ಳುತ್ತವೆ ಹಾಗಾಗಿ ಎಲ್ಲಾ ನೀರಿನ ತಾಣಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂದು ತಿಳಿಸಿದರು.
ಡಾ. ಹೆಚ್. ಸಿ. ಸೌಮ್ಯ, ಕಾರ್ಯಕ್ರಮ ಅಧಿಕಾರಿಗಳು ಉಪಸ್ಥಿತರಿದ್ದು, ಡೆಂಗ್ಯೂ ಬರದಂತೆ ಎಚ್ಚರವಹಿಸಿಕೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್. ಎಸ್. ಎಸ್. ಘಟಕದ ಬ್ರಹ್ಮಗಿರಿ ತಂಡದ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಡೆಂಗ್ಯೂ ಮತ್ತು ಮಲೇರಿಯಾ ಕುರಿತು ಮಾಹಿತಿಯನ್ನು ತಿಳಿಸಿ ರೋಗಕ್ಕೆ ಸಂಬಂಧಪಟ್ಟ ಔಷಧಿಗಳನ್ನು ಉಚಿತವಾಗಿ ವಿತರಿಸಿದರು.