ಗಾಂಧೀಜಿ ಬೋಧನೆಗಳು ಸರ್ವಕಾಲಿಕ: ಪ್ರಕಾಶ ಹಾರಕೂಡೆ

0
46

ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಬೋಧನೆಗಳು ಸರ್ವಕಾಲಕ್ಕೂ ಸಲ್ಲುವಂತಾಗಿವೆ ಎಂದು ಕಲಬುರಗಿ ನಗರ ಮತ್ತು ಗ್ರಾಮೀಣ ಯೋಜನಾ ಕೋಶದ ಜಂಟಿ ನಿರ್ದೇಶಕ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಪ್ರಕಾಶ ಹಾರಕೂಡೆ ಅಭಿಪ್ರಾಯಪಟ್ಟರು. ನಗರದ ಅಕ್ಕಮಹಾದೇವಿ ಕಾಲೋನಿಯ ವಿಶ್ವಭಾರತಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಹಾಗೂ ವಿಜ್ಞಾನ ಪದವಿ ಕಾಲೇಜಿನಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಹಮ್ಮಿಕೊಂಡಿದ್ದ ಮಹಾತ್ಮಾ ಗಾಂಧಿ, ಲಾಲ ಬಹಾದ್ದೂರ ಶಾಸ್ತ್ರೀ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀವನದುದ್ದಕ್ಕೂ ಸರಳತೆಯಿಂದಲೇ ಬದುಕಿ ಎಲ್ಲರಿಗೂ ಸನ್ಮಾರ್ಗದ ದಾರಿ ತೋರಿದ ಮಹಾ ಪುರುಷ ಮಹಾತ್ಮಾ ಗಾಂಧಿಯವರಾಗಿದ್ದಾರೆ ಅವರ ತ್ಯಾಗದ ಫಲವನ್ನು ಇಂದು ನಾವು ನೀವೆಲ್ಲರೂ ಅನುಭವಿಸುತ್ತಿದ್ದೇವೆ ಅದಕ್ಕಾಗಿ ಜೀವನ ಪರ್ಯಂತ ನಾವು ಅವರಿಗೆ ಋಣಿಯಾಗಿರಬೇಕು ಎಂದು ಹೇಳಿದರು. ಕಲಬುರಗಿ ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಸರ್ವ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಅದಕ್ಕಾಗಿ ಪಾಲಿಕೆಯಿಂದ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಈ ನಿಟ್ಟಿನಲ್ಲಿ ಅನೇಕ ಯೋಜನೆಗಳು ಚಾಲ್ತಿಯಲ್ಲಿವೆ ಎಂದು ಹೇಳಿದರು.

Contact Your\'s Advertisement; 9902492681

ಕಾಲೇಜಿನ ಪ್ರಾಚಾರ್ಯ ಪ್ರೋ. ಜಿ ಕೆ ಸುತಾರ ಮಾತನಾಡಿ, ಸರ್ಕಾರದ ಅಭಿವೃದ್ಧಿಯ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ ಆದರಿಂದ ಜನತೆ ತಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡುವುದರ ಮೂಲಕ ಸರ್ಕಾರದ ಜೊತೆ ನಿಲ್ಲಬೇಕು ಎಂದು ನುಡಿದರು.
ಗಾಂಧೀ ಮತ್ತು ಶಾಸ್ತ್ರೀ ಈ ದೇಶದ ಎರಡು ಕಣ್ಣುಗಳಿದ್ದಂತೆ. ಇಬ್ಬರೂ ಸರಳತೆಯಿಂದಲೇ ಹೆಸರಾದವರು. ಸಿದ್ಧಾಂತ, ಬದ್ಧತೆ ಇಲ್ಲದ ವ್ಯಕ್ತಿ ಜೀವನದಲ್ಲಿ ಏನನ್ನೂ ಸಾಧಿಸಲಾರ ಅದಕ್ಕಾಗಿ ಮನಸ್ಸು ಯಾವತ್ತೂ ಸಾಧಿಸುವುದಕ್ಕೆ ತುಡಿಯಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಹಣಮಂತ ಶೇರಿ, ನಿವೃತ್ತ ಉಪನ್ಯಾಸಕ ಎಸ್ ಎನ್ ಪಾಟೀಲ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಡಾ. ಮಂಜುನಾಥ ಸುತಾರ, ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಸುತಾರ ಅಧ್ಯಕ್ಷತೆ ವಹಿಸಿದ್ದರು.
ಕು. ವೈಷ್ಣವಿ ಪ್ರಾರ್ಥಿಸಿದರು. ಉಪನ್ಯಾಸಕ ಮಹೇಶಕುಮಾರ ಹೆಬ್ಬಾಳೆ ಕಾರ್ಯಕ್ರಮ ನಿರ್ವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here