ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಮುಂದಾದ ರಾಜ್ಯ ಸರ್ಕಾರ

0
121

ಕಲಬುರಗಿ; ಕಲ್ಯಾಣ ಕರ್ನಾಟಕ ಪ್ರದೇಶದ, ದೇಶ-ವಿದೇಶಗಳಲ್ಲಿರುವ ಸಂಪತ್ಭರಿತ ಮಾನವ ಸಂಪನ್ಮೂಲವನ್ನು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಅದರ ಸಾಮರ್ಥ್ಯವನ್ನು ಬಳಸಿಕೊಳ್ಳಲು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಕಲಬುರಗಿ ನಗರದಲ್ಲಿ ಸೋಮವಾರ ನಡೆದ ಶರಣಬಸವ ವಿಶ್ವವಿದ್ಯಾಲಯದ ೭ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರ ೫೯ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಖಂಡ್ರೆ, ನಮ್ಮ ಭಾಗದಲ್ಲಿ ಮಾನವ ಸಂಪನ್ಮೂಲ ಸಮೃದ್ಧವಾಗಿದೆ ಹಾಗೂ ಅದಕ್ಕೆ ಅವಕಾಶಗಳ ಕೊರತೆಯಿಂದ ಹಿಂದುಳಿಯುವAತಾಗಿದೆ.

Contact Your\'s Advertisement; 9902492681

ಉನ್ನತ ಶಿಕ್ಷಣ ಸಂಸ್ಥೆಗಳ ಮತ್ತು ತಾಂತ್ರಿಕ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಬಹಿರಂಗಪಡಿಸಲು ಉತ್ತಮ ಅವಕಾಶಗಳ ಹುಡುಕಾಟದಲ್ಲಿ ದೇಶ ಮತ್ತು ವಿದೇಶದ ಇತರ ನಗರಗಳಿಗೆ ಸ್ಥಳಾಂತರಗೊAಡಿದ್ದಾರೆ. “ಈ ದೇಶ ವಿದೇಶಗಳಲ್ಲಿ ನಮ್ಮ ಮಾನವ ಸಂಪನ್ಮೂಲವನ್ನು ಸ್ಥಳಾಂತರಗೊಳ್ಳುವ ಪ್ರಕ್ರಿಯೆಯನ್ನು ತಡೆಗಟ್ಟುವ ತುರ್ತು ಅವಶ್ಯಕತೆಯಿದೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಕೈಗಾರಿಕಾ ವಲಯದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ಈ ಪ್ರದೇಶದ ಮಾನವ ಸಂಪನ್ಮೂಲಗಳಿಗೆ ಉದ್ಯೋಗದ ಮಾರ್ಗಗಳನ್ನು ಒದಗಿಸಲು ಸರ್ಕಾರವು ಬದ್ಧವಾಗಿದೆ” ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ ಶರಣಬಸವೇಶ್ವರ ಸಂಸ್ಥಾನದAತಹ ಧಾರ್ಮಿಕ ಸಂಸ್ಥೆಗಳನ್ನು ಶ್ಲಾಘಿಸಿದ ಖಂಡ್ರೆ, ಧಾರ್ಮಿಕ ಸಂಸ್ಥೆಗಳು, ನರ್ಸರಿಯಿಂದ ಸ್ನಾತಕೋತ್ತರ ಶಿಕ್ಷಣದವರೆಗೆ ಶೈಕ್ಷಣಿಕ ಸರಪಳಿಯನ್ನು ಸ್ಥಾಪಿಸುವ ಮೂಲಕ ಈ ಭಾಗದ ಜನರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಮಾರ್ಗಗಳನ್ನು ವಿಸ್ತರಿಸಿವೆ ಎಂದು ಹೇಳಿದರು.

ಶರಣಬಸವೇಶ್ವರ ಸಂಸ್ಥಾನ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಈ ಭಾಗದ ಶೈಕ್ಷಣಿಕ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದು, ಸಂಸ್ಥಾನದ ೭ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಹಾಗೂ ೮ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರು ಈ ಭಾಗಕ್ಕೆ ಶೈಕ್ಷಣಿಕವಾಗಿ ಉನ್ನತ ಮಟ್ಟಕ್ಕೆ ಕೊಂಡೊಯ್ದು, ಪ್ರಮುಖ ಶೈಕ್ಷಣಿಕ ಕೇಂದ್ರವನ್ನಾಗಿಸಿದ್ದಾರೆ. ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರು ವ್ಯಕ್ತಿ ಮತ್ತು ಸಮಾಜವನ್ನು ಪರಿವರ್ತಿಸಲು ಶಿಕ್ಷಣವೊಂದೇ ಸಾಧನ ಎಂಬ ಅವರ ದೂರದೃಷ್ಟಿ ಇಂದು ನಿಜವಾಗಿದೆ ಎಂದರು.

“ಪೂಜ್ಯ ದೊಡ್ಡಪ್ಪ ಅಪ್ಪಾಜಿ ಅವರು ೧೯೩೪ ರಲ್ಲಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಪ್ರಾರಂಭಿಸಿದರು ಮತ್ತು ಇಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿAದ ನಡೆಸಲ್ಪಡುವ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಈ ಪ್ರದೇಶದ ೩೦,೦೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗಗಳನ್ನು ಒದಗಿಸುವ ದೊಡ್ಡ ಆಲದ ಮರವಾಗಿ ಬೆಳೆದಿದೆ. ಶರಣಬಸವ ವಿಶ್ವವಿದ್ಯಾಲಯದಲ್ಲಿಯೇ ೭೦೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸುತ್ತಿದ್ದಾರೆ ಎಂದು ತಿಳಿದು ಸಂತೋಷವಾಗಿದೆ ಎಂದರು.

ಯಾವುದೇ ರಾಜಿಯಿಲ್ಲದೆ ಗುಣಮಟ್ಟದ ಶಿಕ್ಷಣ ನೀಡುವ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಯತ್ನದಿಂದಾಗಿ ಈ ಭಾಗದ ವಿದ್ಯಾರ್ಥಿಗಳು ನಾಗರಿಕ ಸೇವೆ ಹಾಗೂ ನೀಟ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಖಂಡ್ರೆ ಹೇಳಿದರು.

“ಈ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಪ್ರದರ್ಶಿಸಲು ಪರಿಪೂರ್ಣ ವೇದಿಕೆಯ ಅಗತ್ಯವಿದೆ ಮತ್ತು ಸಂಘದಿAದ ನಡೆಸಲ್ಪಡುವ ಶಿಕ್ಷಣ ಸಂಸ್ಥೆಗಳು ಅವರಿಗೆ ಪರಿಪೂರ್ಣ ವೇದಿಕೆಯನ್ನು ಒದಗಿಸಿವೆ” ಎಂದು ಹೇಳಿದರು.

ಇದಕ್ಕೂ ಮುನ್ನ ಈಶ್ವರ ಖಂಡ್ರೆ ಅವರು ವಿಶ್ವವಿದ್ಯಾಲಯದ ಚೊಚ್ಚಲ ನಿಯತಕಾಲಿಕೆ, ವಿಶ್ವವಿದ್ಯಾಲಯದ ಪ್ರಾಸ್ಪೆಕ್ಟಸ್ ಮತ್ತು ವಿಶ್ವವಿದ್ಯಾಲಯದ ಇತರ ನಿಯತಕಾಲಿಕೆಗಳನ್ನು ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಅವರ ೫೯ನೇ ಜನ್ಮದಿನದಂದು ಸಿಹಿ ತಿನ್ನಿಸಿ ಸನ್ಮಾನಿಸಿದರು. ಇದೇ ವೇಳೆ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ನಿರಂಜನ್ ವಿ ನಿಷ್ಠಿ ಮತ್ತು ಖ್ಯಾತ ಕಲಾವಿದ ಶ್ರೀ ಎ. ಎಸ್. ಪಾಟೀಲ್ ಅವರನ್ನು ತಮ್ಮ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಅಧ್ಯಕ್ಷತೆ ವಹಿಸಿದ್ದರು. ವಿವಿಯ ಕುಲಸಚಿವ ಡಾ. ಎಸ್.ಜಿ.ಡೊಳ್ಳೇಗೌಡರ ಸ್ವಾಗತಿಸಿದರು. ಹಣಕಾಸು ಅಧಿಕಾರಿ ಪ್ರೊ. ಕಿರಣ ಮಾಕಾ ವಂದಿಸಿದರು.

ಈ ಸಮಾರಂಭದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಶಾಸಕ ಜಗದೇವ್ ಗುತ್ತೇದಾರ್, ವಿವಿಯ ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಶ್ರೀ ಬಸವರಾಜ ದೇಶಮುಖ ಅವರ ಪತ್ನಿ ಡಾ. ಉಮಾದೇವಿ ದೇಶಮುಖ, ವಿವಿಯ ನಿರ್ದೇಶಕ ಪ್ರೊ. ವಿ.ಡಿ.ಮೈತ್ರಿ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here