ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಚಾರಣೆ ಹಿನ್ನೆಲೆ: ಆಗಸ್ಟ್ 1 ರಂದು ವ್ಯಸನ ಮುಕ್ತ ದಿನಾಚರಣೆಗೆ ನಿರ್ಧಾರ

0
27

ಕಲಬುರಗಿ: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಚಾರಣೆ ಅಂಗವಾಗಿ ಆಗಸ್ಡ್ 1 ರಂದು ಜಿಲ್ಲಾ ಮತ್ತು ತಾಲೂಕಾ ಕೇಂದ್ರದಲ್ಲಿ “ವ್ಯಸನ‌ ಮುಕ್ತ‌ ದಿನಾಚರಣೆ” ಆಚರಿಸಲು ಮಂಗಳವಾರ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ನೇತೃತ್ವದಲ್ಲಿ ಇಲ್ಲಿನ ಜಿಲಗಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆಗಸ್ಟ್ 1 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮತ್ತು ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಮತ್ತು ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ತಜ್ಞರಿಂದ ಉಪನ್ಯಾಸ ಆಯೋಜಿಸಲು ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಯಿತು.

Contact Your\'s Advertisement; 9902492681

ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು ಮಕ್ಕಳನ್ನು ಕರೆ ತರುವಂತೆ ಡಿ.ಡಿ.ಪಿ.ಐ ಮತ್ತು ಡಿ.ಡಿ.ಪಿ.ಯು ಉಪನಿರ್ದೇಶಕರಿಗೆ ತಿಳಿಸಲಾಯಿತು. ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು, ಜನಪ್ರತಿನಿಧಿಗಳು ಆಗಮಿಸುವುದರಿಂದ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಪೊಲೀಸ್ ಭದ್ರತೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರಾಯಪ್ಪ ಹುಣಸಗಿ ನಿರ್ದೇಶನ ನೀಡಿದರು.

ಅದೇ ರೀತಿ ತಾಲೂಕಾ ಮಟ್ಟದಲ್ಲಿ ವಿವಿಧ ಇಲಾಖೆಯ ಸಹಯೋಗದೊಂದಿಗೆ ವ್ಯಸನ ಮುಕ್ತ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವಂತೆ ಸಭೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಭಾಗವಹಿಸಿದ ತಹಶೀಲ್ದಾರರಿಗೆ ಸೂಚಿಸಲಾಯಿತು.

ಮದ್ಯ ವಸ್ಯನ ಮುಕ್ತ ಶಿಬಿರ: ಕಾರ್ಯಕ್ರಮ ಅಂಗವಾಗಿ ಆರೋಗ್ಯ ಇಲಾಖೆಯಿಂದ ಅಂದು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್‌ ರಂಗಮಂದಿರ ಆವರಣದಲ್ಲಿ ವ್ಯಸನ‌ ಮುಕ್ತ ಶಿಬಿರ ಮತ್ತು ಬೆಳಿಗ್ಗೆ 10.30 ಗಂಟೆಗೆ ಜಿಮ್ಸ್ ಆಸ್ಪತ್ರೆಯ ಆವರಣದಿಂದ ರಂಗಮಂದಿರ ವರೆಗೆ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ನಡೆಸಲು ಸಹ ತಿಳಿಸಲಾಯಿತು.

ಸಭೆಯಲ್ಲಿ ನಗರ ಪೊಲೀಸ್ ಉಪ ಆಯುಕ್ತ ಪ್ರವೀಣ ಎಚ್. ನಾಯಕ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ವೀರೇಂದ್ರ ಕುಮಾರ ಎಲ್., ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಬಿ.ಪಾಟೀಲ, ಆರೋಗ್ಯ ಇಲಾಖೆಯ ಡಾ.ಸುರೇಶ ಮೇಕಿನ್, ಡಿ.ಡಿ.ಪಿ.ಐ ಕಚೇರಿಯ ಡಿ.ಪಿ.ಇ.ಓ ರಾಜಶೇಖರ ಜಿ., ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಂದೀಪ ಡಿ., ಜೆಸ್ಕಾಂ ಎ.ಇ.ಇ. ದಿಲೀಪ ರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು ಭಾಗವಹಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ ಅವರು ಜಯಂತಿ ಅಂಗವಾಗಿ ಕೈಗೊಂಡ ಪೂರ್ವಸಿದ್ಧತೆಗಳ ಕುರಿತು ಸಭೆಗೆ ವಿವರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here