ಚಿತ್ತಾಪುರ: ಚಿತ್ತಾಪುರ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಆ.6 ರಂದು ಮಂಗಳವಾರ ಬೆಳಗ್ಗೆ 10.30ಕ್ಕೆ ತಾಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಡಿ ಮಶಾಕ ತಿಳಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು. ಲೇಖಕ, ಪ್ರಗತಿಪರ ಚಿಂತಕ ಶಿವಸುಂದರ ವಿಶೇಷ ಉಪನ್ಯಾಸ ನೀಡುವರು. ಶರಣಬಸವೇಶ್ವರ ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಸುನಿತಾ ಬಿ.ಪಾಟೀಲ ವಿಚಾರ ಮಂಡಿಸುವರು. ಸಂಘದ ಅಧ್ಯಕ್ಷ ಸಿದ್ದರಾಜು ಮಲಕಂಡಿ ಸಭೆಯ ಅಧ್ಯಕ್ಷತೆ ವಹಿಸುವರು.
ಶಿಕ್ಷಣ ಪ್ರೇಮಿ ನಾಗರಡ್ಡಿಗೌಡ ಪಾಟೀಲ ಕರದಾಳ, ಭಾರತೀಯ ಜನತಾ ಪಕ್ಷದ ತಾಲೂಕು ಅಧ್ಯಕ್ಷ ರವಿಂದ್ರ ಸಜ್ಜನಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಡಾ.ಶಿವರಂಜನ್ ಸತ್ಯಂಪೇಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ತಹಶೀಲ್ದಾರ ಅಮರೇಶ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ತಾಪಂ ಇಒ ನೀಲಗಂಗಾ ಬಬಲಾದ, ಚಿತ್ತಾಪುರ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ವಾಡಿ ಪುರಸಭೆ ಮುಖ್ಯಾಧಿಕಾರಿ ಸಿ.ಫಕೃದ್ದೀನ್ ಸಾಬ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.