ಕಲಬುರಗಿ: ನವದೆಹಲಿಯಲ್ಲಿ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಕಲಬುರಗಿ ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಭೇಟಿ ಮಾಡಿ ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕ ಸಂಬಂಧಿಸಿದ ಸಮಸ್ಯೆಗಳ ಕುರಿತು ವಿವರಿಸಿದರು.
ಕಲ್ಯಾಣದ ಸಮಸ್ಯೆಗಳನ್ನು ಸಂಸತ್ ನಲ್ಲಿ ಪ್ರಸ್ತಾಪಿಸಲು ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.