ಅ.5: ‘ಮಾನವತೆಯೇ ಮಹಾನವಮಿ’ ವಿಶೇಷ ಕಾರ್ಯಕ್ರಮ

0
125

ಕಲಬುರಗಿ: ಇಲ್ಲಿನ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ‘ಸರ್ವ ಶರಣರಾತ್ಮಧ್ವನಿ… ಮಾನವತೆಯೇ ಮಹಾನವಮಿ’ ಎಂಬ ವಿಶೇಷ ಕಾರ್ಯಕ್ರಮವೊಂದನ್ನು ಶನಿವಾರ (ಅ.೫) ಬೆಳಗ್ಗೆ ೧೧.೧೫ ಕ್ಕೆ ನಗರದ ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿರುವ ಶ್ರೀಮತಿ ಪಿಲ್ಲೂ ಹೋಮಿ ಇರಾಣಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಸಮಾಜದಲ್ಲಿ ಅಸಮಾನತೆಯ ತಾಂಡವ, ಬಡವ-ಬಲ್ಲಿದವರ ನಡುವೆ ಮಹದಂತರ, ಹಾಸು ಹೊಕ್ಕಾಗಿರುವ ಮೂಢನಂಬಿಕೆ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಬಲಿ, ದೇವದಾಸಿಯಂಥ ಹೇಯ ಪದ್ಧತಿಗಳು ಇವು ಅಂದಿನ ಸಮಾಜದ ಮಹಾಪೀಡುಗುಗಳಾಗಿದ್ದವು. ಅವುಗಳಿಗೆ ಪರಿಹಾರ ರೂಪವಾಗಿ ಹನ್ನೆರಡನೇ ಶತಮಾನದ ಬಸವಾದಿ ಶರಣರ ವಚನಗಳು ಮಾನವನ ಬದುಕಿನ ಕಾಳಜಿಗಳನ್ನು ಹೊಂದಿದ ರಸಗಟ್ಟಿಗಳು. ಮನುಷ್ಯ ತನ್ನ ಬದುಕಿನಲ್ಲಿ ಅಳವಡಿಸಿಕೊಳ್ಳಲೇಬೇಕಾದ ನಿಜತತ್ವಗಳಾಗಿವೆ. ಇಂಥ ಹಲವು ವಿಚಾರಗಳ ಜತೆಗೆ ಶರಣ ಚಳವಳಿಯನ್ನು ಇಂದಿನ ಯುವ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

Contact Your\'s Advertisement; 9902492681

ಶರಣ ಚಿಂತಕಿ ಸುವರ್ಣಾ ಬಾಬುಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಪಿಡಿಎ ಇಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಸಂಜಯ ಮಾಕಲ್ ವಿಚಾರ ಮಂಡನೆ ಮಾಡಲಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕವಿತಾ ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ, ಉಪನ್ಯಾಸಕಿ ಪಂಚಶೀಲಾ ಬೇನಾಳ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅಕಾಡೆಮಿ ಶಿವರಾಜ ಅಂಡಗಿ, ಪರಮೇಶ್ವರ ಶಟಕಾರ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here